ಷಹಾಜಿ ರಾಜೆ ಬೋಸ್ಲೆಯವರ ಸಮಾಧಿ ಅಭಿವೃದ್ಧಿಗೆ 5 ಕೋಟಿ ರೂ.: ಜಾಧವ್ ಸಂತಸ

ಷಹಾಜಿ ರಾಜೆ ಬೋಸ್ಲೆಯವರ ಸಮಾಧಿ ಅಭಿವೃದ್ಧಿ
ದಾವಣಗೆರೆ: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ 2ನೇ ಬಜೆಟ್‌ನಲ್ಲಿ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿರುವ ಷಹಾಜಿ ರಾಜೆ ಬೋಸ್ಲೆಯವರ ಸಮಾಧಿ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದಾಗಿ ಘೋಷಿಸಿದ್ದು ಸಂತಸ ತಂದಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರೂ, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.
ಮರಾಠ ಸಮಾಜ ಹಾಗೂ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಪರವಾಗಿ ಮುಖ್ಯಮಂತ್ರಿಗಳನ್ನು ಅಭಿನಂದಿಸುವುದಾಗಿ ಜಾಧವ್ ಹೇಳಿದರು.