ಕುಂಬಳೂರು ಗೋಡೆ ಕುಸಿದು ಹೆಣ್ಣು ಮಗು ಮೃತ ಜಿಲ್ಲಾಧಿಕಾರಿಗಳಿಂದ 5 ಲಕ್ಷ ಪರಿಹಾರ
ದಾವಣಗೆರೆ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಒಂದು ವರ್ಷ ಐದು ತಿಂಗಳ ಹೆಣ್ಣು ಮಗು ಮೃತಪಟ್ಟಿದ್ದು, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ರೂ.5 ಲಕ್ಷ ಪರಿಹಾರ ನೀಡಿದರು.
ತುಂಗಾಭದ್ರ ನದಿ ನೀರಿನ ಹರಿವು ಹೆಚ್ಚಳವಾದ ಹಿನ್ನಲೆಯಲ್ಲಿ ಉಕ್ಕಡಗಾತ್ರಿ, ಪತ್ಯಾಪುರ ರಸ್ತೆ ಸಂಪರ್ಕ ಕಡಿತವಾಗಿದ್ದು, ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅತಿಯಾದ ಮಳೆಯಿಂದಾಗಿ ಹರಿಹರ ತಾಲ್ಲೂಕಿನ ತಿಮ್ಮಿನಕಟ್ಟೆ ಗ್ರಾಮದಲ್ಲಿ ಕೃಷಿ ಜಮೀನುಗಳು ಜಲಾವೃತ ಗೊಂಡಿದ್ದು ಮಳೆಹಾನಿ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ಪರಿಶೀಲಿಸಿದರು.
ಈ ವೇಳೆ ಹರಿಹರ ತಹಶೀಲ್ದಾರ್ ಪೃಥ್ವಿ ಸ್ಥಾನಿಕಂ, ಮಲೆಬೆನ್ನೂರು ಉಪತಹಶೀಲ್ದಾರ್ ರವಿ, ಹಾಗೂ ದೇವಸ್ಥಾನದ ಸದಸ್ಯರು ಇದ್ದರು.