ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ- ಡಿಕೆಶಿ

images (2)

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ನೀಡಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವಿಟ್ ಮಾಡಿದ್ದಾರೆ.

ಜನರಿಗೆ ಆದಾಯವಿಲ್ಲ. ಆದರೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ತಲುಪಿದೆ. ಬೆಲೆಯೇರಿಕೆಯಿಂದಾಗಿ ನೊಂದಿರುವ ಕರುನಾಡಿನ ಜನರಿಗಾಗಿ ಕಾಂಗ್ರೆಸ್ ಪಕ್ಷ 4 ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ನುಡಿದಂತೆ ನಡೆಯುವ ನಮ್ಮ ಪಕ್ಷ ಆಡಳಿತಕ್ಕೆ ಬರುವುದು ನಿಶ್ಚಿತ. ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ ಎಂದು ಅವರು ರಾಜ್ಯದ ಜನತೆಗೆ ಕೋರಿದ್ದಾರೆ.

ಬಡವರ ಉನ್ನತಿಗಾಗಿ ಕಾಂಗ್ರೆಸ್ ಪಕ್ಷ ಹಲವು ಯೋಜನೆಗಳನ್ನು ನೀಡಿದೆ. ಕಾಂಗ್ರೆಸ್ ಆಡಳಿತದಲ್ಲಿ ಕಲಬುರಗಿಯಲ್ಲಿ ಭವ್ಯ ಕಟ್ಟಡಗಳು ನಿರ್ಮಾಣವಾಗಿದ್ದು, ಕಾರ್ಮಿಕರ ಮಕ್ಕಳು ಕೂಡ ಮೆಡಿಕಲ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಕೊಡುಗೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಈ ಕುರಿತು ಡಿ.ಕೆ. ಶಿ. ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!