500 ರೂ. ನೋಟು ಎಸೆದ ಡಿಕೆಶಿ ವಿರುದ್ಧ ಎಫ್‌ಐಆರ್

500 ರೂ. ನೋಟು ಎಸೆದ ಡಿಕೆಶಿ ವಿರುದ್ಧ ಎಫ್ಐಆರ್

ಮಂಡ್ಯ: ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ 500 ರೂ.ಗಳ ನೋಟು ಎಸೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ನಗರದ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾರ್ಚ್‌ 28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಆಯೋಜನೆಗೊಂಡಿತ್ತು. ತಾಲ್ಲೂಕಿನ ಕ್ಯಾತುಂಗೆರೆಯಿಂದ ಅವರು ರೋಡ್‌ ಶೋ ಆರಂಭಿಸಿದ್ದರು. ಈ ವೇಳೆ ಜಾನಪದ ಕಲಾ ತಂಡಗಳ ಕಲಾವಿದರು ಡಿಕೆಶಿ ಅವರನ್ನು ಹಣ ಕೊಡುವಂತೆ ಕೋರಿದ್ದರು. ಈ ಸಂದರ್ಭದಲ್ಲಿ ಅವರು ಕಲಾವಿದರತ್ತ ಹಣದ ಕಟ್ಟು ಎಸೆದಿದ್ದರು.

ನಂತರ ಹಣ ಎಸೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರ ವಿರುದ್ಧ ಚುನಾವಣೆ ಸೆಕ್ಟರ್‌ ಅಧಿಕಾರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಏ.2ರಂದು ಗ್ರಾಮಾಂತರ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!