ದೇಶಾದ್ಯಂತ ಇಂದು 5888 ಕೋವಿಡ್ ಕೇಸ್ ದಾಖಲು

ದೇಶಾದ್ಯಂತ ಇಂದು 5888 ಕೋವಿಡ್ ಕೇಸ್ ದಾಖಲು

ನವದೆಹಲಿ: ದೇಶದಲ್ಲಿ ಒಂದೇ ದಿನ 5,888 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸೋಮವಾರ ಪ್ರಕಟಿಸಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 35,199ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ 14 ಜನರು ಮೃತಪಟ್ಟ ವರದಿಯಾಗಿದೆ. ಇದರಲ್ಲಿ ದೆಹಲಿ, ಹಿಮಾಚಲ ಪ್ರದೇಶ, ಗುಜರಾತ್, ಜಮ್ಮು–ಕಾಶ್ಮೀರ, ಮಹಾರಾಷ್ಟ್ರ, ರಾಜಸ್ಥಾನ, ಕೇರಳದಲ್ಲಿ ಸಾವಿನ ಪ್ರಕರಣಗಳು ದಾಖಲಾಗಿದೆ.
ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇ 6.91ರಷ್ಟಿದ್ದು, ಮರಣ ಪ್ರಮಾಣ ಶೇ 1.1 ಆಗಿದೆ. ಹಾಗೂ, ಚೇತರಿಕೆ ಶೇ 98.73ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!