ಲೋಕಲ್ ಸುದ್ದಿ

5 ಮತ್ತು 8 ನೇ ತರಗತಿ ಮೌಲ್ಯಾಂಕನ

5 ಮತ್ತು 8 ನೇ ತರಗತಿ ಮೌಲ್ಯಾಂಕನ

ದಾವಣಗೆರೆ : 5 ಮತ್ತು 8 ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ ಮತ್ತು ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುತ್ತದೆ.
ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕೆಯ ಗುಣನಮಟ್ಟ, ನ್ಯೂನ್ಯತೆ ಮತ್ತು ಪ್ರಗತಿಗಳನ್ನು ತಿಳಿದುಕೊಂಡು  ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.
ಪಠ್ಯಪುಸ್ತಕವನ್ನು ಆಧರಿಸಿ ಮೌಲ್ಯಾಂಕನದ ಪ್ರಶ್ನೆಗಳನ್ನು ಸಿದ್ಧ ಪಡಿಸಿದ್ದು, ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಿ ಫಲಿತಾಂಶದ ಗೌಪ್ಯವಾಗಿ ಇರಿಸÀಲಾಗುತ್ತದೆ ಎಂದು ಡಯಟ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಚಾರ್ಯರು ಹಾಗೂ ಪದನಿಮಿತ್ತ ಉಪನಿರ್ದೇಶಕರು(ಅಭಿವೃದ್ಧಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!