ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ 60 ಹೆಚ್ಚುವರಿ ವಿಶೇಷ ಬಸ್
ದಾವಣಗೆರೆ : ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಮಾ.20 ರಂದು ಜರುಗಲಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದೆಲ್ಲಡೆಯಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವಿವಿಧ ಘಟಕಗಳಿಂದ 60 ಹೆಚ್ಚುವರಿ ವಿಶೇಷ ಬಸ್ ಕಾರ್ಯಾಚರಣೆ ಮಾಡಲಿದೆ. ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುವುದು. ಭಕ್ತಾದಿಗಳು ವಿಶೇಷ ಬಸ್ ವ್ಯವಸ್ಥೆಯ ಸದುಪಯೋಗವನ್ನು ಉತ್ತಮ ರೀತಿಯಿಂದ ಪಡೆದುಕೊಂಡು ಶ್ರೀ ಗುರುವಿನ ಕೃಪೆಗೆ ಪಾತ್ರರಾಗುವಂತೆ ಕೆಎಸ್ಆರ್ಟಿಸಿ ದಾವಣಗೆರೆ ವಿಭಾಗದ ವಿಭಾಗಿಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.