ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲಿರುವ 600 ಅಭ್ಯರ್ಥಿಗಳು! ಪರೀಕ್ಷಾ ಕೇಂದ್ರಗಳಲ್ಲಿ ಇಎನ್‌ಟಿ ಸ್ಪೇಷಲಿಸ್ಟ್ಗಳ ನೇಮಕ
ದಾವಣಗೆರೆ : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲಿರುವ 600 ಪರೀಕ್ಶಾರ್ಥಿಗಳ ಕಿವಿ, ಮೂಗು, ಗಂಟಲು ಪರೀಕ್ಷೆ ನಡೆಸುವ ಇಎನ್‌ಟಿ ಸ್ಪೆಷಲಿಸ್ಟ್ಗಳ ನೇಮಿಸಿ ಕಟ್ಟುನಿಟ್ಟಿನ ಕ್ರಮದೊಂದಿಗೆ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಪರೀಕ್ಷೆಯಲ್ಲಿ ಅಕ್ರಮ ತಡೆಗಟ್ಟುವ ಸಲುವಾಗಿ ಇಎನ್‌ಟಿ ಪರೀಕ್ಷೆ ನಡೆಸುವ ಕ್ರಮಕೈಗೊಂಡ ರಾಜ್ಯದ ಮೊದಲ ಜಿಲ್ಲೆ ದಾವಣಗೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರಿಂದಾಗಿ ಎಲ್ಲರ ಚಿತ್ತ ದಾವಣಗೆರೆಯತ್ತ ನೆಟ್ಟಿದೆ.
ಇತ್ತೀಚಿಗೆ ಪಿ.ಎಸ್.ಐ ನೇಮಕದಲ್ಲಿ ಸಾಕಷ್ಟು ಅಕ್ರಮಗಳು ಕಂಡುಬ0ದಿರುವುದರಿ0ದ ಜಿಲ್ಲೆಯಲ್ಲಿ ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅತ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿರುವ ಕ್ರಮದ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಮೇ.21, 22ರಂದು ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಇಎನ್‌ಟಿ ಸ್ಪೆಷಲಿಸ್ಟ್ಗಳನ್ನು ನೇಮಿಸಿ ಯಾವುದೇ ರೀತಿಯ ಅಕ್ರಮ ಸಂಭವಿಸದ0ತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 600 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳಿಗೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಿದ್ದು, ಕೋವಿಡ್ ನಿಯಾಮನುಸಾರ ಪರೀಕ್ಷಾ ಅಭ್ಯರ್ಥಿಗಳಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಮಾಡಿ ಉಚಿತ ಮಾಸ್ಕ್ ನೀಡಿ ಪರೀಕ್ಷೆ ನಡೆಸಲಾಗುವುದು.
ಪರೀಕ್ಷಾ ಕೇಂದ್ರದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕರು ಹಾಗೂ ಅಭ್ಯರ್ಥಿಗಳು ಮೊಬೈಲ್, ಶೂ, ಎಲೆಕ್ಟ್ರಾನಿಕ್ ವಾಚ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ಪ್ರತಿ ಕೊಠಡಿಯಲ್ಲೂ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸುವುದು. ಜಾಮಿಟ್ರಿ ಬಾಕ್ಸ್ ಇದ್ದಲ್ಲಿ ಕಡ್ಡಾಯವಾಗಿ ತಪಾಸಣೆಗೊಳಪಡಿಸಿ ರೇಖಾ ಗಣಿತ ಪರಿಕರಗಳನ್ನು ಮಾತ್ರ ಅನುಮತಿಸಲಾಗುವುದು. ಒಂದು ವೇಳೆ ತಂದಿರುವುದು ಕಂಡುಬ0ದಲ್ಲಿ ತಕ್ಷಣವೇ ಅವರನ್ನು ಪರೀಕ್ಷೆಯಿಂದ ಅಮಾನತು ಮಾಡಲಾಗುವುದು. ಪರೀಕ್ಷಾ ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು ಪರೀಕ್ಷಾರ್ಥಿಗಳ ಸಂಬ0ಧಿಗಳು ಸಂಬ0ಧಿತ ಕಾರ್ಯಗಳಲ್ಲಿ ಭಾಗವಹಿಸುವಂತಿಲ್ಲ ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ನಡೆಯಬಹುದಾದ ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಂಖ್ಯೆ: 08192-257778 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಮಾತನಾಡಿ, ಇತ್ತೀಚಿಗೆ ಪಿ.ಎಸ್.ಐ ನೇಮಕದಲ್ಲಿ ಸಾಕಷ್ಟು ಅಕ್ರಮಗಳು ಕಂಡುಬ0ದಿರುವುದರಿ0ದ ಜಿಲ್ಲೆಯಲ್ಲಿ ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅತ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಒಬ್ಬ ಅಭ್ಯರ್ಥಿ ಅಕ್ರಮ ನಡೆಯುವಂತ ಒಂದು ಸಣ್ಣ ಸಂದೇಹ ಕಂಡುಬ0ದರೂ ಸಹ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.