ಭಾನುವಾರ ಕೋವಿಡ್‌ನಿಂದ 7 ಸಾವು, 1890 ಪ್ರಕರಣ ಪತ್ತೆ

ಭಾನುವಾರ ಕೋವಿಡ್‌ನಿಂದ 7 ಸಾವು, 1890 ಪ್ರಕರಣ ಪತ್ತೆ

ನವದೆಹಲಿ: ದೇಶದಾದ್ಯಂತ ಭಾನುವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,890 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಮೂಲಕ 149 ದಿನಗಳಲ್ಲೇ ಗರಿಷ್ಠ ಕೊರೊನಾ ಸೋಂಕು ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಅಕ್ಟೋಬರ್ 28ರಂದು ದೇಶದಲ್ಲಿ 2,208 ಪ್ರಕರಣ ದಾಖಲಾಗಿತ್ತು.

ಸಕ್ರಿಯ ಪ್ರಕರಣಗಳ ಸಂಖ್ಯೆ 9,433ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇದುವರೆಗೆ 4.47 ಕೋಟಿ (4,47,04,147) ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,30,831 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಈವರೆಗೆ ಒಟ್ಟು 4,41,63,883 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 1.56 ಮತ್ತು ವಾರದ ದೃಢ ಪ್ರಮಾಣ ಶೇ 1.29ರಷ್ಟಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.02 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.79 ಆಗಿದೆ. ದೇಶದಲ್ಲಿ ಈವರೆಗೆ 220.65 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!