ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದುಕೊಂಡು ನಗರದ ಮ್ಯಾಕ್ಸ್ ಶಾಪಿಂಗ್ ಮಾಲ್‍ಗೆ 7000 ದಂಡ

ದಾವಣಗೆರೆ :   ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499  ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.


ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!