ಜಿಲ್ಲಾ ಕಾಂಗ್ರೆಸ್ ವತಿಯಿಂದ 74ನೇ ಗಣರಾಜ್ಯೋತ್ಸವ ಆಚರಣೆ ಬಿಜೆಪಿಯಿಂದ ಸಂವಿಧಾನ ವಿರೋಧಿ ನಡೆಗೆ ಆಕ್ಷೇಪ

ದಾವಣಗೆರೆ: ದೇಶದ ಸಂವಿಧಾನವು ಎಲ್ಲಾ ಜಾತಿ-ಧರ್ಮಗಳಿಗೆ ಅನ್ವಯವಾಗುವಂತೆ ಸಂವಿಧಾನ ರಚನೆಯಾದರೂ ಸಹ ಇಂದು ಅಧಿಕಾರದಲ್ಲಿರುವ ಬಿಜೆಪಿಯಿಂದ ಒಂದು ಜಾತಿ-ಧರ್ಮಕ್ಕೆ ಸೀಮಿತವಾಗಿ ಕಾರ್ಯನಿರ್ವಹಿಸುವ ಮೂಲಕ ಸಂವಿಧಾನ ವಿರೋಧಿ ನಡೆ ಅನುಸರಿಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪರವರು ದೂರಿದರು.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರದಂದು ಜಿಲ್ಲಾ ಕಾಂಗ್ರೆಸ್ ಕಛೇರಿಯ ಡಾ|| ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಭವನದಲ್ಲಿ 74ನೇ ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.
ಭಾರತ ದೇಶ ವಿವಿಧ ಜಾತಿ-ಧರ್ಮಗಳಿಂದ ಕೂಡಿರುವ ದೇಶವನ್ನು ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸುವಂತೆ ಆಡಳೀತ ನಡೆಸಿ ಭಯದ ವಾತಾವರಣವನ್ನು ಸೃಷ್ಟಿಸಿ ದೇಶದ ಸಂವಿಧಾನ ವಿರೋಧಿ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಸಂವಿಧಾನ ವಿರೋಧಿ ಬಿಜೆಪಿ ಆಡಳಿತವನ್ನು ತೊಲಗಿಸಲು ಕರ್ನಾಟಕ ರಾಜ್ಯದಲ್ಲಿ ನಡೆವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪರ ಮತ ಚಲಾಯಿಸುವ ಮೂಲಕ ದೇಶದಲ್ಲಿ ಬಿಜೆಪಿ ಆಡಳಿತಕ್ಕೆ ಅಂತ್ಯ ಹಾಡಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಜಿ.ಎಸ್.ಮಂಜುನಾಥ್, ಸದಸ್ಯರಾದ ಎ.ನಾಗರಾಜ್, ಶ್ರೀಮತಿ ಸುಧಾ ಇಟ್ಟಿಗುಡಿ ಮಂಜುನಾಥ್, ಶ್ರೀಮತಿ ಮೀನಾಕ್ಷಿ ಜಗದೀಶ್, ವಿರೇಶ್ ನಾಯ್ಕ, ಹೆಚ್.ಜಯಣ್ಣ, ಕೊಡಪಾನ ದಾದಾಪೀರ್, ಜಿಲ್ಲಾ ಸೇವಾದಳದ ಜಿಲ್ಲಾಧ್ಯಕ್ಷ ಚಂದ್ರು ಡೋಲಿ, ಮಹಿಳಾ ಕಾಂಗ್ರೆಸ್‍ನ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ ಪ್ರಶಾಂತ್, ಶ್ರೀಮತಿ ದ್ರಾಕ್ಷಾಯಣಮ್ಮ, ಶ್ರೀಮತಿ ಗೀತಾ ಚಂದ್ರಶೇಖರ್, ಲಿಯಾಕತ್ ಅಲಿ, ಇಟ್ಟಿಗುಡಿ ಮಂಜುನಾಥ್ ಮತ್ತಿತರರಿದ್ದರು.