ಬಿಪಿಎಲ್ ಕಾರ್ಡುದಾರ ಕುಟುಂಬಕ್ಕೆ 75 ಯುನಿಟ್ ಉಚಿತ ವಿದ್ಯುತ್! ಮೇ.1ರಿಂದ ಅನ್ವಯ
ವಿದ್ಯಾನಾಯ್ಕ್ ಅರೇಹಳ್ಳಿ
ದಾವಣಗೆರೆ : ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಮಾಸಿಕ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವುದಾಗಿ ಸರ್ಕಾರ ಮೇ.18,2022ರಂದು ಆದೇಶಿಸಿದೆ.
ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡದ ಭಾಗ್ಯಜ್ಯೋತಿ ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡ0ತೆ) ಮಾಸಿಕ 75 ಯೂನಿಟ್‌ಗಳವರೆಗೆ ಮೇ.1, 2022ರಿಂದ ಅನ್ವಯವಾಗುವಂತೆ ಉಚಿತ ವಿದ್ಯುತ್ ಒದಗಿಸಲಾಗುವುದು ಎಂದು ಆದೇಶದಲ್ಲಿ ಸರ್ಕಾರ ತಿಳಿಸಿದೆ.
ಈ ಹಿಂದೆ ಭಾಗ್ಯಜ್ಯೋತಿ, ಕುಟೀರಜ್ಯೋತಿ ವಿದ್ಯುತ್ ಸ್ಥಾವರ ಒಂದಕ್ಕೆ ಪ್ರತಿ ತಿಂಗಳು 40 ಯೂನಿಟ್‌ವರೆಗೆ ಮಾತ್ರ ಉಚಿತ ವಿದ್ಯುತ್ ಒದಗಿಸಲು (ನಿಗಧಿಪಡಿಸಿದ ನಿಬಂಧನೆ ಮತ್ತು ಷರತ್ತಿಗೆ ಒಳಪಟ್ಟು) ಅವಕಾಶ ನೀಡಲಾಗಿತ್ತು. ಅಷ್ಟೇಅಲ್ಲದೆ ಸರ್ಕಾರದ ಆದೇಶದಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಾರ್ಷಿಕ ಸಹಾಯಧನದ ಅವಶ್ಯಕತೆಯನ್ನು ನಿಗಧಿಪಡಿಸುತ್ತಾ ಬಂದಿತ್ತು.
ಏಪ್ರಿಲ್ 5, 2022ರಂದು ಮುಖ್ಯಮಂತ್ರಿಗಳು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್‌ರಾಮ್ ರವರ 115ನೇ ಜಯಂತಿ ಸಮಾರಂಭದಲ್ಲಿ ಹಾಗೂ ಏಪ್ರಿಲ್ 14ರಂದು ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನ ಆಚರಣೆ ಸಾರ್ವಜನಿಕ ಸಮಾರಂಭದಲ್ಲಿಯೂ ಸಹ ಗ್ರಾಮೀಣ ಪ್ರದೇಶದಲ್ಲಿ ಭಾಗ್ಯಜ್ಯೋತಿ, ಕುಟೀರಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡಲಾಗುತ್ತಿರುವ 40 ಯೂನಿಟ್‌ಗಳನ್ನು 75 ಯೂನಿಟ್‌ಗಳವರೆಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದರು.
ಮೇ. 17, 2022ರ ನಿರ್ದೇಶನದಂತೆ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭಾಗ್ಯಜ್ಯೋತಿ ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡ0ತೆ) ಮಾಸಿಕ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎನ್. ಮಂಗಳಗೌರಿ ಮೇ. 18ರಂದು ಆದೇಶಿಸಿದ್ದಾರೆ.
garudavoice21@gmail.com 9740365719