ಹೈಕೋರ್ಟ್ ತೀರ್ಪು ವಿರೋಧಿಸಿ ಪರೀಕ್ಷೆಗೆ 8 ವಿದ್ಯಾರ್ಥಿನಿಯರು ಗೈರು.!
ಯಾದಗಿರಿ : ಸಮವಸ್ತ್ರದ ಜೊತೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿರುವ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾ ಮಾಡಿದೆ. ಶಾಲೆಗಳಲ್ಲಿನ ಸಮವಸ್ತ್ರ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಹೈಕೋರ್ಟ್ ಎತ್ರಿಹಿಡಿದಿದೆ.
ಈ ತೀರ್ಪು ಪ್ರಕಟವಾದ ಬೆನ್ನಲ್ಲೇ ಯಾದಗಿರಿ ಜಿಲ್ಲೆಯ ಸುರಪುರದ ಕಾಲೇಜೊಂದರಲ್ಲಿ ವಿಧ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾರೆ. ಹಿಜಾಬ್ ಧರಿಸದೆ ತರಗತಿಗೆ ಬರುವುದಿಲ್ಲ ಎಂದು 8 ಮಂದಿ ವಿದ್ಯಾರ್ಥಿನಿಯರು ಇಂದು ಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆ. ಕೆಂಬಾವಿ ಪದವಿಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.