24 ಗಂಟೆಯಲ್ಲಿ 843 ಜನರಿಗೆ ಕೋವಿಡ್

24 ಗಂಟೆಯಲ್ಲಿ 843 ಜನರಿಗೆ ಕೋವಿಡ್

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 843 ಪ್ರಕರಣಗಳು ದಾಖಲಾಗಿವೆ.
ಕಳೆದ 126 ದಿನಗಳಲ್ಲಿ ಒಂದು ದಿನದಲ್ಲಿ ದಾಖಲಾದ ಅತ್ಯಧಿಕ ಪ್ರಕರಣಗಳ ಸಂಖ್ಯೆ ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 5,389ಕ್ಕೆ ಏರಿಕೆಯಾಗಿದೆ. ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.46 ಕೋಟಿಗೆ (4,46,94,349) ಏರಿದೆ.
ಇಂದು 4 ಮಂದಿ ಮೃತಪಟ್ಟಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,799ರಷ್ಟಾಗಿದೆ.
ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಹಾಗೂ ಕೇರಳದಲ್ಲಿ ಇಬ್ಬರು ಕೋವಿಡ್‌ನಿಂದ ಅಸುನೀಗಿದ್ದಾರೆ.
ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.01ರಷ್ಟು ಸಕ್ರಿಯ ಪ್ರಕರಣಗಳಿವೆ. ಚೇತರಿಕೆ ದರ ಶೇಕಡ 98.80ರಷ್ಟಿದೆ.

Leave a Reply

Your email address will not be published. Required fields are marked *

error: Content is protected !!