ವಿಪ್ರೋ ಕಂಪನಿಗೆ ಜಿಎಂಐಟಿಯ 97 ವಿದ್ಯಾರ್ಥಿಗಳು ಆಯ್ಕೆ
ದಾವಣಗೆರೆ: ವಿಪ್ರೋ ಕಂಪನಿಯು ಇತ್ತೀಚಿಗೆ ನಡೆಸಿದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಯ 97 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2 ಹಂತದಲ್ಲಿ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಇದುವರೆಗೂ ಒಟ್ಟು 97 ವಿದ್ಯಾರ್ಥಿಗಳು ಆಯ್ಕೆಯಾಗಿ ಇನ್ನೂ 13 ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಂತದಲ್ಲಿ 64 ವಿದ್ಯಾರ್ಥಿಗಳು ಮತ್ತು ಎರಡನೇ ಹಂತದಲ್ಲಿ 33 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ಈ ಶೈಕ್ಷಣಿಕ ವರ್ಷದ ಏಳನೇ ಸೆಮಿಸ್ಟರ್ ಮುಕ್ತಾಯಕ್ಕೆ ಒಟ್ಟು 620 ಆಫರ್ಸ್ ಜಿಎಂಐಟಿ ವಿದ್ಯಾರ್ಥಿಗಳು ಪಡೆದಿದ್ದು, ಎಂಟನೇ ಸೆಮಿಸ್ಟರ್ ಮುಕ್ತಾಯಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕಂಪನಿ ಆಫರ್ಸ್ ಪಡೆಯಲಿದ್ದೇವೆ ಎಂದು ತಿಳಿಸಿದರು.
ಇನ್ನೂ ಅನೇಕ ಕಂಪನಿಗಳ ಫಲಿತಾಂಶದ ನಿರೀಕ್ಷೆಯಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಕಂಪನಿ ಜಾಬ್ ಆಫರ್ ಪಡೆಯಲಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.
ಹೆಚ್ಚಿನ ಪ್ಯಾಕೇಜ್ ನೀಡುವ ಕಂಪನಿಗಳು ಮತ್ತು ಅಂತರರಾಷ್ಟ್ರೀಯ ಜಾಬ್ ಆಫರ್ಸ್ ನೀಡುವ ಕಂಪನಿಗಳ ಹುಡುಕಾಟದಲ್ಲಿದ್ದು, ಮುಂದಿನ ದಿನಗಳಲ್ಲಿ ಈ ಬೆಳವಣಿಗೆಗಳನ್ನು ಕಾಣಬಹುದಾಗಿದೆ ಎಂದು ಆಡಳಿತಾಧಿಕಾರಿ ಶ್ರೀ ವೈ ಯು ಸುಭಾಶ್ಚಂದ್ರ ತಿಳಿಸಿದರು.
ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆಯನ್ನು ಆಚರಿಸಲಾಯಿತು. ಹಾಗೆಯೇ ಮುಂದಿನ ಶೈಕ್ಷಣಿಕ ವರ್ಷದ ಮುಂಗಡ ಪ್ರವೇಶ ದಾಖಲಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಗಳು ಕಾಲೇಜಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಗಾಗಿ ಸಂಪರ್ಕಿಸಿ: garudavoice21@gmail.com 9740365719