ಡಿ.10, 11 ರಂದು ನಗರದ ಬಿ ಐ ಇ ಟಿ ಕಾಲೇಜ್ ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಎರಡು ದಿನಗಳ ಕಾರ್ಯಾಗಾರ

ದಾವಣಗೆರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಡಿ.೧೦, ೧೧ರಂದು ನಗರದ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲ ಡಾ.ಹೆಚ್.ಬಿ.ಅರವಿಂದ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಾಗಾರದ
ಉದ್ಘಾಟನಾ ಸಮಾರಂಭ ಡಿ.೧೦ರಂದು ಬೆಳಗ್ಗೆ ೧೦ ಗಂಟೆಗೆ ಬಿಐಇಟಿ ಆವರಣದಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯಲಿದೆ. ವಿಟಿಯು ಕುಲಪತಿ ಡಾ.ಕರಿಸಿದ್ದಪ್ಪ, ಕುಲಸಚಿವ ಡಾ.ಎ.ಎಸ್.ದೇಶಪಾಂಡೆ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ
ಡಾ.ಕೆ.ಸಿದ್ದಪ್ಪ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ನಿರ್ದೇಶಕ ಪ್ರೊ.ವೈ.ವೃಷಭೇಂದ್ರಪ್ಪ, ಸಿ.ಆರ್.ನಿರ್ಮಲಾ, ಕಲ್ಲೇಶಪ್ಪ, ಡಾ.ಜಿ.ಪಿ.ದೇಸಾಯಿ ಇದ್ದರು.