ಎಂ ಎಲ್ ಸಿ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಹಾವೇರಿ ಬಿಜೆಪಿಯಿಂದ ಉಚ್ಚಾಟನೆ

ಹಾವೇರಿ: ಧಾರವಾಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಪ್ರದೀಪ ಶೆಟ್ಟರ ಇವರ ವಿರುದ್ದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮಲ್ಲಿಕಾರ್ಜುನ ಹಾವೇರಿ ಅವರನ್ನು ಪಕ್ಷದ ಶಿಸ್ತುನ್ನು ಉಲ್ಲಂಘಿಸಿದ್ದಕ್ಕಾಗಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷರಾದ ಲಿಂಗರಾಜ ಪಾಟೀಲ ಇವರ ಸೂಚನೆಯ ಮೇರಿಗೆ ಭಾರತೀಯ ಜನತಾ ಪಾರ್ಟಿಯಿಂದ ೬ ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಪಕ್ಷದ ಅಧ್ಯಕ್ಷರಾದ ಸಿದ್ದರಾಜ ಕಲಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.