ಎಸ್ ಎಸ್ ಎಂ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿ: ಸ್ಪಷ್ಟನೆ

ದಾವಣಗೆರೆ: ಮಾಜಿ ಸಚಿವ ಎಸ್. ಎಸ್ ಮಲ್ಲಿಕಾರ್ಜುನ್ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿರುವ ದುಷ್ಕರ್ಮಿಗಳು ಸ್ನೇಹಿತರಾದವರಿಗೆ ಮೆಸೆಂಜರ್ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.
ಎಸ್ ಎಸ್ ಮಲ್ಲಿಕಾರ್ಜುನ್ ಅವರ ಹೆಸರಲ್ಲಿ ಅಪರಿಚಿತ ವ್ಯಕ್ತಿ ತಮ್ಮ ಸ್ನೇಹಿತ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತುರ್ತಾಗಿ 48 ಸಾವಿರ ರು., ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಅದು ನಕಲಿ ಎಂದು ಸ್ಪಷ್ಟನೆ ನೀಡಿರುವ ಮಾಜಿ ಸಚಿವ ಮಲ್ಲಿಕಾರ್ಜುನ್ ಅವರು, ಯಾರಿಗೂ ಹಣ ರವಾನೆ ಮಾಡಬೇಡಿ ಎಂದು ವಿನಂತಿಸಿದ್ದಾರೆ.