ಇನ್ಮುಂದೆ ಸರ್ಕಾರಿ ನೌಕರರು‌ ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬೇಕಾಬಿಟ್ಟಿ ಬರೆಯುವ ಸರ್ಕಾರ ನೌಕರರಿಗೆ ಮೂಗುದಾರ.!

Empoly

ದಾವಣಗೆರೆ: ಇನ್ಮುಂದೆ ಸರ್ಕಾರಿ ನೌಕರರು‌ ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಇಲಾಖೆಗಳ ಪೂರ್ವಾನುಮತಿ ಇಲ್ಲದೇ ವ್ಯಕ್ತಿ ಅಥವಾ ರಾಜಕೀಯ ಪರವಾಗಿ ತಮ್ಮ ನಿಲುವುಗಳನ್ನು ಪ್ರದರ್ಶಿಸುವಂತಿಲ್ಲ!

ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳ ಅನುಸಾರ ಪ್ರತಿಯೊಬ್ಬ ಸರ್ಕಾರಿ ನೌಕರ ಅನುಚಿತವಾದ ಯಾವುದನ್ನೂ ಮಾಡುವಂತಿಲ್ಲ. ಆತ ನೀತಿ, ನಿಯಮದಂತೆಯೇ ವರ್ತಿಸಬೇಕು. ರಾಜಕೀಯವಾಗಿ ತಟಸ್ಥನಾಗಿರಬೇಕು. ನ್ಯಾಯಸಮ್ಮತವಾಗಿ ಮತ್ತು ನಿಷ್ಪಕ್ಷಪಾತದಿಂದ ಇರಬೇಕೆಂದು. ಹಾಗಾಗಿ ಯಾವುದೇ ರಾಜಕೀಯ ಪಕ್ಷಗಳ ಪರವಾಗಿ ನಿಲುವು ತಾಳುವಂತಿಲ್ಲ ಎಂದು ಸರ್ಕಾರ ನೌಕರರಿಗೆ ಮೂಗುದಾರ ಹಾಕಿದೆ.

ಸರ್ಕಾರಿ ನೌಕರರು ಆಕಾಶವಾಣಿ, ದೂರದರ್ಶನ ಪುಸಾರ, ಚಲನಚಿತ್ರ ಅಥವಾ ಬರವಣಿಗೆಯು ಸಂಪೂರ್ಣವಾಗಿ ಸಾಹಿತ್ಯಿಕ ಮತ್ತು ಕಲಾತ್ಮಕ ಅಥವಾ ವೈಜ್ಞಾನಿಕ ಸ್ವರೂಪದ್ದಾಗಿರಬೇಕು.‌ ಇಲ್ಲವೆಂದರೆ ಸರ್ಕಾರಿ ನೌಕರನು ನೇಮಿಸಲಾದ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು‌ ಎಂದು ಸರ್ಕಾರ ಆದೇಶಿಸಿದೆ

ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರ ಅಥವಾ ಇತರೆ ಸರ್ಕಾರಗಳ ಪ್ರಸ್ತುತ ಅಥವಾ ಇತ್ತೀಚಿನ ಯಾವುದೇ ನೀತಿಯ ಅಥವಾ ಕ್ರಮದ ಬಗ್ಗೆ ವಿರುದ್ಧ ಟೀಕೆ ಅಥವಾ ಅಭಿಪ್ರಾಯವನ್ನು ವ್ಯಕ್ತಪಡಿಸುವಂತಿಲ್ಲ. ಸರ್ಕಾರಿ ನೌಕರರ ಮಾನ್ಯತೆ ಪಡೆದ ಸಂಘದ ಪದಾಧಿಕಾರಿಗಳು ಸರ್ಕಾರಿ ನೌಕರರ ಸೇವಾ ಸ್ಥಿತಿ ಗತಿ ರಕ್ಷಿಸುವ ಅಥವಾ ಅವುಗಳಲ್ಲಿ ಸುಧಾರಣೆಯನ್ನು ಸುನಿಶ್ಚಿತಗೊಳಿಸುವ ಉದ್ದೇಶಗಳಿಗಾಗಿ ವ್ಯಕ್ತಪಡಿಸಿದ ಪ್ರಾಮಾಣಿಕ ಅಭಿಪ್ರಾಯಗಳಿಗೆ ಮಾತ್ರ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ.

ಇತ್ತೀಚಿಗೆ ದಿನಗಳಲ್ಲಿ ಕೆಲವು ಸರ್ಕಾರಿ ನೌಕರರು ಅಂತರ್ಜಾಲದ ವೆಬ್‌ಸೈಟ್‌ಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಿಯಮ ಮೀರಿ ಸರ್ಕಾರ ಮತ್ತು ಇತರೆ ಸರ್ಕಾರಿ ನೌಕರರಿಗೆ ಮುಜುಗರ ಉಂಟುಮಾಡುವಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಈ ಕೈಗೊಂಡಿರುವುದಾಗಿ ಸರ್ಕಾರದ
ಅಧೀನ ಕಾರ್ಯದರ್ಶಿ ನಾಗರತ್ನ ವಿ.‌ಪಾಟೀಲ್ ತಿಳಿಸಿದ್ದು, ಆದೇಶ ಉಲ್ಲಂಘಿಸಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!