ನಗರದಲ್ಲಿ ಬೆಳ್ಳಂಬೆಳಗ್ಗೆ ಅಪಘಾತ.! ಡೆಂಟಲ್ ವಿದ್ಯಾರ್ಥಿನಿ ಸ್ಥಳದಲ್ಲಿ ಸಾವು

ದಾವಣಗೆರೆ: ಬೆಳ್ಳಂಬೆಳಿಗ್ಗೆ ಕಾರು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ದುರ್ಮರಣಕ್ಕೀಡಾಗಿರುವ ಘಟನೆ ನಗರದ ಎಂಸಿಸಿ ಬಿ ಬ್ಲಾಕ್ ನ ಈಜುಕೊಳದ ಬಳಿ ನಡೆದಿದೆ.
ಬಾಪೂಜಿ ಡೆಂಟಲ್ ಕಾಲೇಜಿನ ಸ್ನಾತಕೋತ್ತರ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿ ಹೈದರಾಬಾದ್ ಮೂಲದ ಪ್ರಿಯಾಂಕಾ (25) ಮೃತಪಟ್ಟ ದುರ್ದೈವಿ.
ಪ್ರಿಯಾಂಕ ಎಂದಿನಂತೆ ಇಂದು ಬೆಳಿಗ್ಗೆ ಕಾಲೇಜಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರೊಂದು ಬೈಕ್ ಗೆ ಗುದ್ದಿದ್ದು, ಪ್ರಿಯಾಂಕ ಕೆಳಗೆ ಬಿದ್ದು ತಲೆಗೆ ಬಲವಾದ ಏಟು ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿತಾದರೂ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.