ಜಿಲ್ಲಾ ಕಾಂಗ್ರೆಸ್ನಿಂದ ಜ.12 ರಂದು ಸ್ವಾಮಿ ವಿವೇಕಾನಂದ 159ನೇ ಜನ್ಮದಿನಾಚರಣೆ

ದಾವಣಗೆರೆ : ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜ.12 ರಂದು ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 11-30 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯ ಶಾಮನೂರು ಶಿವಶಂಕರಪ್ಪ ಸಭಾ ಭವನದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಆದ ಕಾರಣ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮುಖಂಡರುಗಳು,ಕಾರ್ಯಕರ್ತರು, ಪಕ್ಷದ ವಿವಿಧ ಘಟಕಗಳಾದ ಎನ್ಎಸ್ಯುಐ, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಜಿಲ್ಲಾ ಸೇವಾದಳ, ಕಾರ್ಮಿಕ ವಿಭಾಗ, ಪರಿಶಿಷ್ಟ ಜಾತಿ, ಪಂಗಡ, ಓ.ಬಿ.ಸಿ.,ಅಲ್ಪಸಂಖ್ಯಾತರು, ಅಮಗವಿಕಲರ ವಿಭಾಗದ ಎಲ್ಲಾ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಎಪಿಎಂಸಿ ಸದಸ್ಯರುಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಮಾಸ್ಕ್ ಧರಿಸಿ ಅಂತರ ಕಾಪಾಡಿಕೊಂಡು ಭಾಗವಹಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ ಪತ್ರಿಕೆಗೆ ತಿಳಿಸಿದ್ದಾರೆ.