ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ 19 ಪರಿಶೀಲನಾ ಸಭೆಯ ಮುಖ್ಯಾಂಶಗಳು👇
ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ವರ್ಚುಯಲ್ ಸಭೆಯ ನಂತರ ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಮಾಧ್ಯಮದವರೊಂದಿಗೆ ಮಾತನಾಡಿದರು.
1. ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ಕೊಡಲು ಸೂಚಿಸಲಾಯಿತು.. ಹೆಚ್ಚು ಸಿಬ್ಬಂದಿ ನಿಯೋಜಿಸಲು ಸೂಚಿಸಿದರು.
2. ಜನ ಟ್ರಯಾಜಿಂಗ್ ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ ನೀಡಿದರು.
3. ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚಿಸಲಾಯಿತು. ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು.
4. ಅಂತೆಯೆ ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದರು.
5. ಔಷಧಿ ಕಿಟ್ ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಸೂಚಿಸಿದರು.
6. ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆಯಲು ಸಲಹೆ ನೀಡಿದರು.
7. ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೆಕು.
8. ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್ ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು.
9. ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ವಿಶ್ವಾಸ ಮೂಡಿಸಬೇಕು.
10. ಆಕ್ಸಿಜನ್ ಪ್ಲಾಂಟ್ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ.
11. ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು.
12. ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು.
13. ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.
14. ಔಷಧಿಗಳನ್ನು ಕೂಡಲೇ ಒದಗಿಸಬೇಕು. ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ವಹಿಸಲು ಸೂಚಿಸಿದರು.
15. ಜನರು ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಬಗ್ಗೆ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಲಾಯಿತು.
16. ಭಾರತ ಸರ್ಕಾರದ ನಿಯಮಾವಳಿಗಳಂತೆ ಐ.ಸಿ.ಎಂ.ಆರ್ ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಅನುಸರಿಸಲು ಸೂಚಿಸಿದರು.
17. ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒ ಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧರಿಸಲಾಯಿತು.
18. 15 ರಿಂದ 18 ವರ್ಷ ವಯೋಮಾನದವರಿಗೆ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲು ಸೂಚಿಸಲಾಯಿತು.