ಸಚಿವ ಡಾ. ಕೆ. ಸುಧಾಕರ್ ಅವರಿಂದ ಜಿಲ್ಲಾ ಆಸ್ಪತ್ರೆಗೆ ಭೇಟಿ :ಪ್ರಗತಿ ಪರಿಶೀಲನೆ

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ರವರು ಶನಿವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಡಯಲೀಸಿಸ್ ಘಟಕ, ಪ್ರಸೂತಿ ವಿಭಾಗ, ಮಕ್ಕಳ ಚಿಕಿತ್ಸಾ ವಿಭಾಗ ಹಾಗೂ ಪ್ರಯೋಗಾಲಯಕ್ಕೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ವೈದ್ಯಕೀಯ ಚಿಕಿತ್ಸೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ರುದ್ರಮೂರ್ತಿ, ನಿವಾಸಿ ವೈದ್ಯಧಿಕಾರಿ ಡಾ.ರಮೇಶ್, ಜಿಲ್ಲಾ ಸರ್ವಾಲೆನ್ಸ್ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಸೇರಿದಂತೆ ಆಸ್ಪತ್ರೆಯ ವೈದ್ಯ ವೃಂದ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.