Cash Ledger Govt Officials: ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರಲು ನಗದು ಲೆಡ್ಜರ್ ನಿರ್ವಹಣೆಗೆ ಆದೇಶ – ಸಿ.ಎಸ್. ಪಿ ರವಿಕುಮಾರ್

Screenshot_20220207-161922_Drive

 

ದಾವಣಗೆರೆ: ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರಲು ತಕ್ಷಣದಿಂದ ಜಾರಿಯಾಗುವಂತೆ ನಗದು ಘೋಷಣೆ ವಹಿ (ಲೆಡ್ಜರ್) Cash Ledger ನಿರ್ವಹಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ Chief Secretary p.Ravikumar ಆದೇಶ ಹೊರಡಿಸಿದ್ದಾರೆ.

ಹೈಕೋರ್ಟ್ High Court ನವೆಂಬರ್ 10 ರಂದು ನೀಡಿರುವ ನಿರ್ದೇಶನ್ವಯ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು/ ಮಂಡಳಿಗಳು/ ನಿಗಮಗಳು ಕೆಲ ಕಾರ್ಯವಿಧಾನ ಅನುಸರಿಸಿ, ನಗದು ಘೋಷಣೆ ವಹಿಯನ್ನು ನಿರ್ವಹಣೆ ಮಾಡುವಂತೆ ನಿರ್ದೇಶನ ಹೊರಡಿಸಿದ್ದಾರೆ.

ಹಾಗೂ ಈ ಕಾರ್ಯ ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಈ ಬಗೆಗೆ ಯಾವುದೇ ಲೋಪ ಕಂಡುಬAದರೆ ಅವುಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು.

1. ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ನೌಕರರ ವೈಯಕ್ತಿಕ ನಗದನ್ನು ಗಮನಿಸಲು ಪ್ರತಿ ಕೆಲಸದ ದಿನದ ಪ್ರಾರಂಭದಲ್ಲಿ “ನಗದು ಘೋಷಣೆ ವಹಿ” ಯನ್ನು ತೆರೆಯತಕ್ಕದ್ದು.

2. ಸರ್ಕಾರಿ ಘೋಷಣೆ ವಹಿಯು ಸಂಬAಧಪಟ್ಟ ವಿಭಾಗ/ ಶಾಖೆಯ ಗ್ರೂಪ್-ಬಿ ಅಧಿಕಾರಿಯ ವಶದಲ್ಲಿರತಕ್ಕದ್ದು ಮತ್ತು ಸದರಿ ಅಧಿಕಾರಿಯು ನೌಕರರು ಮಾಡಿದ ನಮೂದುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿರುತ್ತಾರೆ.

3. ಸರ್ಕಾರಿ ನೌಕರರು ಅಧಿಕೃತ ಸಹಿ ಹಾಜರಾತಿ ವಹಿ/ಎಎಂಎಸ್ ನಲ್ಲಿ ಕೆಲಸದ ದಿನದಂದು ಕರ್ತವ್ಯಕ್ಕೆ ವರದಿ ಮಾಡಿದ ತಕ್ಷಣ, ಅವನು/ಅವಳು ಕಚೇರಿಗೆ ತಂದ ನಗದು ಮೊತ್ತವನ್ನು ನಗದು ಘೋಷಣೆ ವಹಿಯಲ್ಲಿ ತನ್ನ ಸಹಿಯೊಂದಿಗೆ ಘೋಷಿಸತಕ್ಕದ್ದು.

4. ಯಾವುದೇ ನೌಕರರು ನಗದು ಘೋಷಣೆ ವಹಿಯಲ್ಲಿ ಘೋಷಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ಹೊಂದಿರುವುದು ಕಂಡು ಬಂದರೆ, ಅಂತಹ ಹೆಚ್ಚುವರಿ ಹಣವನ್ನು ಅಕ್ರಮ ಸಂಪಾದನೆ ಎಂದು ಅರ್ಥೈಸಲಾಗುತ್ತದೆ. ಹಾಗೂ ಅಂತಹ ಹೆಚ್ಚುವರಿ ಹಣವನ್ನು ಸಕ್ರಮ ಹಣ ಎಂದು ಸಾಬೀತುಪಡಿಸುವುದು ನೌಕರರ ಹೊಣೆಯಾಗಿರುತ್ತದೆ.

5. ನಗದು ಘೋಷಣೆ ವಹಿಯನ್ನು ಕಚೇರಿ ವೇಳೆಯ ಎಲ್ಲಾ ಸಮಯದಲ್ಲಿ ಯಾವುದೇ ಉನ್ನತ/ ಸಕ್ರಮ ಪ್ರಾಧಿಕಾರ/ಘಟಕದ ಮುಖ್ಯಸ್ಥರು/ ವಿಭಾಗದ ಮುಖ್ಯಸ್ಥರ ತಪಾಸಣೆಗಾಗಿ ತೆರೆದಿರಬೇಕು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!