ದಾವಣಗೆರೆ ನಗರದ ಈ ಭಾಗದಲ್ಲಿ ಫೆ 25 ರಂದು ವಿದ್ಯುತ್ ವ್ಯತ್ಯಯ

WhatsApp Image 2022-02-24 at 7.54.02 PM

ದಾವಣಗೆರೆ: ದಾವಣಗೆರೆ ನಗರ ಉಪವಿಭಾಗ-1ರ 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಇಂಡಸ್ಟ್ರಿಯಲ್ ಫೀಡರ್‍ನಲ್ಲಿ ಕೆ.ಯು.ಐ.ಡಿ.ಎಫ್.ಸಿ. 24*7 ಜಲಸಿರಿ ಯೋಜನೆಯಡಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.25 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವುಂಟಾಗಲಿದೆ.
ಇಂಡಸ್ಟ್ರಿಯಲ್ ಏರಿಯಾ ಲೋಕಿಕೆರೆ ರಸ್ತೆ, ಲಲಿತಾ ಇಂಟರ್‍ನ್ಯಾಷನಲ್ ಸ್ಕೂಲ್, ಸುಬ್ರಹ್ಮಣ್ಯ ನಗರ, ಎಸ್.ಎ. ರವೀಂದ್ರನಾಥ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!