ಆಯವ್ಯಯ 2022-2023 ಮುಖ್ಯಮಂತ್ರಿ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ಪ್ರಥಮ ಭಾರಿಗೆ ಮಂಡಿಸಿದ ಚೊಚ್ಚಲ ಬಜೆಟ್ ರಾಜ್ಯದ ಎಲ್ಲರನ್ನೂ ಒಳಗೊಂಡು ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ.

WhatsApp Image 2022-03-04 at 3.48.58 PM

ಆರ್ಥಿಕ ಶಿಸ್ತನ್ನು ಒಳಗೊಳ್ಳುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವಲ್ಲಿ 2022-23ನೇ ಸಾಲಿನ ಬಜೆಟ್ ರಾಜ್ಯದ ಅಭಿವೃದ್ಧಿ ಮುನ್ನುಡಿ ಬರೆದಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಸಕ್ತ ಸಾಲಿನ ಆಯವ್ಯಯ ಹೆಚ್ಚು ಒತ್ತು ನೀಡಿದೆ.

ರೈತರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗದ ಜನರು ಸ್ವಾಭಿಮಾನದ ಜೀವನ ನಡೆಸಲು ಪೂರಕವಾದ ಕಾರ್ಯಕ್ರಮಗಳನ್ನು 2022-23ನೇ ಸಾಲಿನ ಬಜೆಟ್ ನಲ್ಲಿ ಮಾನ್ಯಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ನೀಡಿದ್ದಾರೆ.

ಇದರಿಂದಾಗಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿ ನಾಡಿನ ಅಭಿವೃದ್ಧಿಗೂ ಪೂರಕವಾಗಲಿದೆ. ನಗರ ಪ್ರದೇಶಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು 2022-23ನೇ ಸಾಲಿನ ಬಜೆಟ್ ನಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಘೋಷಿಸಿರುವುದು ಸ್ವಾಗತಾರ್ಹ.

1. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆಯನ್ನು ಒಟ್ಟು ರೂ.3885 ಕೋಟಿ ರೂಪಾಯಿಗಳ ಮೊತ್ತದಲ್ಲಿ 2022-23ನೇ ಸಾಲಿನಿಂದ 2024-25ನೇ ಸಾಲಿನ ಅವಧಿಯಲ್ಲಿ ಅನುಷ್ಟಾನಗೊಳಿಸಲಾಗುವುದು.
2. ರಾಜ್ಯದ ಆಯ್ದ ನಗರಗಳಲ್ಲಿ ನೀರಿನ ಸಂಪರ್ಕ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲು ಮುಂದಿನ 5 ವರ್ಷಗಳಲ್ಲಿ ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯನ್ನು ಅನುಷ್ಟಾನಗೊಳಿಸಲು ಕೇಂದ್ರ ಸರ್ಕಾರವು ರೂ. 4615 ಕೋಟಿಗಳನ್ನು ಹಂಚಿಕೆ ಮಾಡಿದೆ.

3. ಕೇಂದ್ರ ಪುರಸ್ಕೃತ ಯೋಜನೆಯಾದ ಸ್ವಚ್ಚ ಭಾರತ ಮಿಷನ್-2.0 ಅನ್ನು ಮುಂದಿನ 5 ವರ್ಷಗಳ ಅವಧಿಯಲ್ಲಿ ರೂ.2245 ಕೋಟಿಗಳ ಕೇಂದ್ರದ ನೆರವಿನೊಂದಿಗೆ ಅನುಷ್ಠಾನಗೊಳಿಸಲಾಗುವುದು.

4. ಪೌರಕಾರ್ಮಿಕರು ಕ್ಲಿಷ್ಟಕರ ಹಾಗೂ ಅಪಾಯಕರ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಮೊಟ್ಟಮೊದಲ ಬಾರಿಗೆ ಪೌರಕಾರ್ಮಿಕರಿಗೆ ಮಾಸಿಕ ರೂ.2000/-ಗಳ ಸಂಕಷ್ಟ ಭತ್ಯೆಯನ್ನು (ಹಾರ್ಷಿಪ್ ಅಲೋಯನ್ಸ್) ಅನ್ನು ಘೋಷಿಸಿದೆ.

5. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಪ್ರಸ್ತುತ ಒಟ್ಟು ರೂ. 5878 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅನುಷ್ಟಾನಗೊಳಿಸುತ್ತಿರುವ ಯೋಜನೆಗಳಲ್ಲಿ 2021-22ನೇ ಸಾಲಿನಲ್ಲಿ 18 ಯೋಜನೆಗಳು 2021-22ನೇ ಸಾಲಿನಲ್ಲಿ 18 ಯೋಜನೆಗಳು ಹಾಗೂ 2022-23ನೇ ಸಾಲಿನಲ್ಲಿ 38 ಯೋಜನೆಗಳನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ಐ.ಟಿ.ಬಿ.ಟಿ. ಸಂಶೋಧನಾ ವಲಯಗಳಂತಹ ಉದ್ದಿಮೆಗಳ ನೆಲೆಯಾಗಿದೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು 2022-23ನೇ ಸಾಲಿನ ಆಯವ್ಯಯದಲ್ಲಿ ಮಾನ್ಯ ಮುಖ್ಯಮಂತ್ರಿಗಳು ನೀಡಿದ್ದಾರೆ.

1. ಬೆಂಗಳೂರಿನ ಕೆ.ಆರ್. ಪುರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲೆ ಮಲ್ಲಪ್ಪಶೆಟ್ಟಿ ಕೆರೆ ಅಭಿವೃದ್ಧಿಗೆ ಬಿ.ಬಿ.ಎಂ.ಪಿ. ವತಿಯಿಂದ ರೂಪುರೇಶಗಳನ್ನು ಸಿದ್ದಪಡಿಸಲು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ.
2. ವೈಟ್ ಪೀಲ್ಡ್, ಕೆ.ಆರ್.ಪುರಂ. ಜ್ಞಾನಭಾರತಿ, ಯಶವಂತಪುರ, ಯಲಹಂಕ, ಬೈಯಪ್ಪನಹಳ್ಳಿ ರೈಲುನಿಲ್ದಾಣಗಳಲ್ಲಿ ರೂ.55 ಕೋಟಿಗಳ ವೆಚ್ಚದಲ್ಲಿ ಭಾರತೀಯ ರೈಲ್ವೆಯೊಂದಿಗೆ ಮೆಟ್ರೋ ನಿಲ್ದಾಣದ ಸಂಪರ್ಕ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು.

3. ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ 2022-23ನೇ ಸಾಲಿನಲ್ಲಿ ಒಟ್ಟಾರೆಯಾಗಿ ರೂ.8409 ಕೋಟಿಗಳ ಅನುದಾನವನ್ನು ಮಾನ್ಯ ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ನೀಡಿದ್ದಾರೆ.

ರಾಜ್ಯದ ರಾಜಧಾನಿಯಾದ ಬೆಂಗಳೂರು ದೇಶದ ಇತರೆ ಮಹಾನಗರಗಳಂತೆ ಹೆಚ್ಚು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ. ಒಟ್ಟಾರೆಯಾಗಿ 2022-23ನೇ ಸಾಲಿನ ಬಜೆಟ್ ಸರ್ವರನ್ನು ದೃಷ್ಠಿಯಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸಿ, ಜನರ ಮತ್ತು ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿದೆ.

(ಬಿ.ಎ. ಬಸವರಾಜ)
ನಗರಾಭಿವೃದ್ಧಿ ಸಚಿವರು
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!