ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಸಹೋದರನ ಡ್ರೈವರ್ ಭೀಕರ ಹತ್ಯೆ
ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹೋದರನ ಕಾರು ಚಾಲಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಲಕ್ಷ್ಮಣ ಸವದಿ ಸಹೋದರ ಪರಪ್ಪ ಸವದಿ ಅವರ ಕಾರು ಚಾಲಕನಾಗಿದ್ದ 25 ವರ್ಷದ ಸಿದ್ಧಾರೂಢ ಶಿರಗುಪ್ಪ ಹತ್ಯೆಯಾದ ವ್ಯಕ್ತಿ. ದರೂರು ಗ್ರಾಮದ ಸಿದ್ಧಾರೂಢ ಶಿರಗುಪ್ಪನನ್ನು ಅಥಣಿ ಬಳಿ ಕೈ-ಕಾಲು ಕಟ್ಟಿ ನೇಣು ಬಿಗಿದು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಸಿದ್ಧಾರೂಢ, ಪರಪ್ಪ ಸವದಿ ಜತೆ ಉಗಾರ ಗ್ರಾಮಕ್ಕೆ ತೆರಳಿದ್ದ. ತಡ ರಾತ್ರಿ 11 ಗಂಟೆ ಸುಮಾರಿಗೆ ಅಥಣಿಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾರು ಚಾಲಕನನ್ನು ಹಿಡಿದು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದಿದ್ದಾರೆ.