ರಾಹುಲ್ ಗಾಂಧಿ ಮತ್ತೊಮ್ಮೆ ಎಐಸಿಸಿ ಅಧ್ಯಕ್ಷ ಪಟ್ಟ ಸಿಗಲಿ : ಸಭೆಯಲ್ಲಿ ಒತ್ತಾಯ

rahul gaandhi

ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಪರಾಭವ ಕಂಡ ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷಗಿರಿ ಬದಲಾವಣೆ ಕುರಿತ ಚಟುವಟಿಕೆಗಳು ನಡೆಯುತ್ತಿವೆ. ಈ ಬಗ್ಗೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಈ ನಡುವೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜೀನಾಮೆ ನೀಡುತ್ತಾರೆ ಎಂಬ ಬಗ್ಗೆ ವರದಿ ಸಹ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಇದೆಲ್ಲ ಸುಳ್ಳು ಎಂದಿದ್ದರು. ಇಂದು ನಡೆದ ಕಾಂಗ್ರೆಸ್ ವರ್ಕಿಂಗ್ ಕಮಿಟಿ (ಸಿಡಬ್ಲುಸಿ) ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!