ಹಿಜಾಬ್ ಮತ್ತು ಕೇಸರಿ ಶಾಲು ವಿಚಾರ.! ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಹೇಳಿಕೆ ಪ್ರಕಟಿಸಿದರೆ ಕಾನೂನು ಕ್ರಮ – ಡಿಸಿ, ಎಸ್ ಪಿ ಖಡಕ್ ಆದೇಶ

dc sp davanagere

ದಾವಣಗೆರೆ: ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ, ಮಾನ್ಯ ಉಚ್ಚನ್ಯಾಯಾಲಯದ ತೀರ್ಪಿನ ಪರವಾಗಲಿ ಅಥವಾ ವಿರೋಧವಾಗಲಿ ವಾಟ್ಸ್ಆಪ್, ಫೇಸ್‌ಬುಕ್, ಇನ್ಸಾಗ್ರಾಮ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪೋಸ್ಟ್, ಸ್ಟೇಟಸ್ ಅಥವಾ ಪ್ರಚೋದನಾಕಾರಿ ಹೇಳಿಕೆಗಳನ್ನು ಹಾಕುವುದನ್ನು ಮತ್ತು ಮೆರವಣಿಗೆ, ವಿಜಯೋತ್ಸವ ಹಾಗೂ ಪ್ರತಿಭಟನೆ ಮಾಡುವುದು ಕಲಂ. 144 ಸಿಆರ್‌ಪಿಸಿ ಅಡಿಯಲ್ಲಿ ನಿಷೇಧಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಗುಂಪುಗಾರಿಕೆ, ಗಲಾಟೆ, ದೊಂಬಿ ವಗೈರ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಇದರ ಬಗ್ಗೆ ಮಾಹಿತಿ ಇದ್ದಲ್ಲಿ ಕಾನೂನು ಕೈಗೆತ್ತಿಕೊಳ್ಳದೇ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸುವುದು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದಾವಣಗೆರೆ ಜಿಲ್ಲೆಯಾದ್ಯಂತ ದಿನಾಂಕ 15.03.2022 ರಂದು ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ 19.03.2022 ರಂದು ಬೆಳಿಗ್ಗೆ 6.00 ಗಂಟೆಯವರೆಗೆ ನಿಬಂಧನೆಗಳಿಗೆ ಒಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿರುತ್ತದೆ. ಸದರಿ

ಆದೇಶದ ನಿಬಂಧನೆ

ಕ್ರಮ ಸಂಖ್ಯೆ (11) ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯವು ತೀರ್ಪು ಪ್ರಕಟಿಸಿದ ನಂತರ ಸದರಿ ತೀರ್ಪಿನ ಪರವಾಗಿ ಅಥವಾ ವಿರುದ್ಧವಾಗಿ ಫೇಸ್‌ಬುಕ್‌ಗಳಲ್ಲಿ / ವಾಟ್ಸಪ್‌ಗಳಲ್ಲಿ / ಟ್ವಿಟರ್‌ಗಳಲ್ಲಿ ಹಾಗೂ ಯಾವುದೇ ರೀತಿಯ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ರವಾನಿಸುವುದು ಮತ್ತು ಪ್ರಚುರಪಡಿಸುವುದನ್ನು ನಿಷೇಧಿಸಲಾಗಿದೆ ಎಂಬುದನ್ನು ಸೇರ್ಪಡೆಗೊಳಿಸಿ ಅದೇಶಿಸಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!