ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟಿದೆ ಗೊತ್ತಾ?

petrol

ನವದೆಹಲಿ: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಪ್ರತಿ ಲೀಟರ್‌ಗೆ 80 ಪೈಸೆ ಏರಿಕೆ ಕಂಡು ಬಂದಿದೆ. ಸುಮಾರು 137 ದಿನಗಳ ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಣೆ ಮಾಡಿದೆ. 2021ರ ಮೇ 4ರಿಂದ ನವೆಂಬರ್ 4ರವರೆಗೆ ಪೆಟ್ರೋಲ್ ಒಟ್ಟು 60 ಬಾರಿ ಹಾಗೂ ಡೀಸೆಲ್ 55 ಬಾರಿ ಏರಿಕೆ ಕಂಡಿತ್ತು. ಆ ಬಳಿಕ ಕೇಂದ್ರ ಸರ್ಕಾರ ತೆರಿಗೆ ಇಳಿಕೆ ಮಾಡಿದ ಬಳಿಕ ಅನೇಕ ರಾಜ್ಯಗಳು ವ್ಯಾಟ್, ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿತ್ತು. ಆ ನಂತರ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯು ಏರಿಕೆ ಕಂಡಿರಲಿಲ್ಲ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಹೊರತುಪಡಿಸಿ ಕೆಲ ಜಿಲ್ಲೆಗಳಲ್ಲಿ ಮಾತ್ರ ಪೆಟ್ರೋಲ್, ಡೀಸೆಲ್ ಬೆಲೆಯು ಏರಿಳಿತ ಕಂಡು ಬಂದಿತ್ತು.

ಈಗ ಉಕ್ರೇನ್ ಹಾಗೂ ರಷ್ಯಾದ ಯುದ್ಧದ ನಡುವೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆಯು ಏರಿಕೆ ಕಾಣುತ್ತಿದೆ. ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ಮಧ್ಯೆ ಭಾರತದಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಇಂದು ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 101.26 ರೂಪಾಯಿ ಆಗಿದೆ. ನಿನ್ನೆ ದಕ್ಷಿಣ ಕನ್ನಡದಲ್ಲಿ ಪೆಟ್ರೋಲ್ ಬೆಲೆ 100.11 ರೂ ಆಗಿತ್ತು. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ದರ 101.49 ಆಗಿದೆ. ನಿನ್ನೆ ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ದರ 100.22 ರೂ ಆಗಿತ್ತು. ಬೆಂಗಳೂರಿನಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಪ್ರತಿ ಲೀಟರ್‌ಗೆ 100.58 ರೂಪಾಯಿಯಿದ್ದು ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಆದರೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆದ ಬೆನ್ನಲ್ಲೇ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯು 101.42 ರೂಪಾಯಿ ಆಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್‌ಗೆ ಅತ್ಯಧಿಕ ಬೆಲೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ 103.30 ರೂ ಪ್ರತಿ ಲೀಟರ್ ಪೆಟ್ರೋಲ್‌ಗೆ ಇದ್ದು, ಕರ್ನಾಟಕದಲ್ಲೇ ಅತ್ಯಧಿಕ ಬೆಲೆ ಎನಿಸಿಕೊಂಡಿದೆ. ನಿನ್ನೆ ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 102.23 ರೂಪಾಯಿ ಆಗಿತ್ತು. ಉಳಿದಂತೆ ಇತರೆ ಜಿಲ್ಲೆಗಳಲ್ಲಿ 99 ರಿಂದ 102ರೂ ನಷ್ಟಿದೆ ಎಂದು ಗುಡ್‌ರಿಟರ್ನ್್ಸ ಇನ್ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಈ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸರಾಸರಿ 30-35 ಪೈಸೆಯಷ್ಟು ಏರಿಕೆಯಾಗಿತ್ತು. ನಂತರ ಸೆಸ್ ತಗ್ಗಿಸಿದ್ದರಿಂದ ಇಂಧನ ದರ ಇಳಿಕೆಯಾಗಿ, ಬೆಂಗಳೂರಲ್ಲಿ ಪ್ರತಿ ಲೀಟರ್‌ಗೆ 85.01 ರೂ ಇತ್ತು. ಆದರೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಈಗ ಏರಿಕೆ ಕಂಡಿದ್ದು, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆಯು 85.80 ರೂ ಆಗಿದೆ. 80 ಪೈಸೆ ಡೀಸೆಲ್ ಬೆಲೆ ಏರಿಕೆ ಬಳಿಕ ಬಳ್ಳಾರಿ ಜಿಲ್ಲೆಯಲ್ಲಿ 87.46 ರೂ ಪ್ರತಿ ಲೀಟರ್ ನಷ್ಟಿದ್ದು, ರಾಜ್ಯದಲ್ಲೇ ಅತ್ಯಧಿಕ ಬೆಲೆ ಹೊಂದಿದೆ. ನಿನ್ನೆ ಬಳ್ಳಾರಿ ಜಿಲ್ಲೆಯಲ್ಲಿ 86.26 ರೂ ಪ್ರತಿ ಲೀಟರ್ ನಷ್ಟಿತ್ತು. ಕೊಡಗು, ಚಿಕ್ಕಬಳ್ಳಾಪುರ, ಬೆಳಗಾವಿ ಜಿಲ್ಲೆಗಳಲ್ಲಿ 86 ರೂ ಪ್ಲಸ್ ದರ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತ್ಯಧಿಕ 84 ರಿಂದ 85 ರೂಪಾಯಿಯಷ್ಟಿದೆ. ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್, ಡೀಸೆಲ್ ದರ ಬದಲಾವಣೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ.

ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿ0ದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಇಂದು ದೇಶದ ಮೂರು ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದರ ಏರಿಳಿತ ಪ್ರಸ್ತುತ ಅಂತಾರಾಷ್ಟಿಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಹೆಚ್ಚಳವಾಗಿದೆ.

 

Leave a Reply

Your email address will not be published. Required fields are marked *

error: Content is protected !!