‘ಕಾಶ್ಮೀರ ಫೈಲ್ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಿ! ಅರವಿಂದ್ ಕೇಜ್ರಿವಾಲ್ ವಾಗ್ದಾಳಿ
ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ಗಳನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸಬೇಕೆಂ ಬ ಭಾರತೀಯ ಜನತಾ ಪಕ್ಷ (ಬಿಜೆಪಿ) ಅವರ ಬೇಡಿಕೆಯ ವಿರುದ್ಧ ವಾಗ್ದಾಳಿ ನಡೆಸಿದರು. ಅದನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲು ಬಿಜೆಪಿಯು ವಿವೇಕ್ ಅಗ್ನಿಹೋತ್ರಿ ಅವರನ್ನು ಕೇಳಬೇಕು ಮತ್ತು ಪ್ರತಿಯೊಬ್ಬರೂ ಅದನ್ನು ಉಚಿತವಾಗಿ ನೋಡುತ್ತಾರೆ. ಕೆಲವರು ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೋಟಿಗಟ್ಟಲೆ ಸಂಪಾದಿಸಿದ್ದಾರೆ ಮತ್ತು ನಿಮಗೆ (ಪಂಡಿತರು) ಕೇವಲ ಪೋಸ್ಟರ್‌ಗಳನ್ನು ಹಾಕುವ ಕೆಲಸವನ್ನು ನೀಡಿದ್ದಾರೆ ಎಂದು ಕೇಜ್ರಿವಾಲ್ ವಾಗ್ದಾಳಿ ಮಾಡಿದ್ದಾರೆ.
ಕಾಶ್ಮೀರಿ ಪಂಡಿತರ ವಲಸೆಯ ನೋವನ್ನು ತೋರಿಸುವ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಮಾರ್ಚ್ 11ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಬಾಕ್ಸ್ ಆಫೀಸ್‌ನಲ್ಲಿ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ, ಅನೇಕ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಇವುಗಳಲ್ಲಿ ಬಿಹಾರ, ಮಧ್ಯಪ್ರದೇಶ, ಹರಿಯಾಣ, ಉತ್ತರ ಪ್ರದೇಶ, ಗುಜರಾತ್, ತ್ರಿಪುರಾ, ಗೋವಾ ಮತ್ತು ಉತ್ತರಾಖಂಡ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗಿದೆ.
ಬಿಜೆಪಿ ಶಾಸಕರು ಬುಧವಾರ ನಡೆಯುತ್ತಿರುವ ವಿಧಾನಸಭೆ ಅಧಿವೇಶನಕ್ಕೆ ಅಡ್ಡಿಪಡಿಸಿ ಕಾಶ್ಮೀರ ಫೈಲ್‌ಗಳನ್ನು ತೆರಿಗೆ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ವಾಗ್ದಾಳಿ ನಡೆಸಿರುವ ಕೆಜ್ರಿವಾಲ್ ಚಿತ್ರವೊಂದನ್ನು ತೆರಿಗೆ ಮುಕ್ತ ಮಾಡೋದರಿಂದ ಯಾರಿಗೆ ಲಾಭ ಆಗಲಿದೆ? ತೆರಿಗೆ ಮುಕ್ತ ಮಾಡುವುದು ಏಕೆ? ಇಂತಹ ಅನೇಕ ಪ್ರಶ್ನೆಗಳು ಉದ್ಭವಿಸುತ್ತವೆ. 2017ರಲ್ಲಿ ಜಿಎಸ್‌ಟಿ ಜಾರಿಗೆ ಬರುವವರೆಗೆ ರಾಜ್ಯ ಸರ್ಕಾರಗಳು ಚಿತ್ರಮಂದಿರಗಳಿದ ಮನರಂಜನಾ ತೆರಿಗೆ ಸಂಗ್ರಹ ಮಾಡುತ್ತಿದ್ದವು. ಆದರೆ ಹೊಸ ತೆರಿಗೆ ಜಾರಿಯ ಬಳಿಕ ದೇಶದ ಪ್ರತಿ ರಾಜ್ಯಗಳಲ್ಲಿ ಚಲನಚಿತ್ರ ಟಿಕೆಟ್‌ಗಳ ಮೇಲೆ ಶೇಕಡಾ 28ರಷ್ಟು ಜಿಎಸ್‌ಟಿ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂ ಡಿತು. ಅಲ್ಲದೆ, ಈ ತೆರಿಗೆಯಿಂದ ಬರುವ ಆದಾಯದ ಅರ್ಧದಷ್ಟು ಹಣವನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಹಂಚಿಕೊಳ್ಳಲು ಒಪ್ಪಿಕೊಂಡವು. ಈ ಹೊಸ ನೀತಿಯಿಂದಾಗಿ ನಮಗೆ ಪರಿಹಾರ ಬೇಕು.. ಸಡಿಲಿಕೆ ಬೇಕು ಎಂದು ಚಿತ್ರರಂಗ ಧ್ವನಿ ಎತ್ತಿತು. ಟಿಕೆಟ್‌ಗೆ ಶೇ.28ರಷ್ಟು ತೆರಿಗೆ ಕಟ್ಟೋದು ತುಂಬಾ ಕಷ್ಟ ಎಂದು ಸರಕಾರಗಳ ಮೇಲೆ ಒತ್ತಡ ಹೇರಿದರು. ಕೇಂದ್ರ ಸರಕಾರ ಈ ಒತ್ತಡಕ್ಕೆ ಮಣಿದು, ಎರಡು ಭಾಗಗಳಾಗಿ ವಿಂಗಡಿಸಿ ತೆರಿಗೆ ಹಾಕುವುದಾಗಿ ಹೇಳಿತು.
ಮೊದಲನೆಯದು: ಥಿಯೇಟರ್‌ಗಳಲ್ಲಿ ಟಿಕೆಟ್ ದರ 100 ರೂ.ಗಿಂತ ಕಡಿಮೆಯಿದ್ದರೆ 12ರಷ್ಟು ಜಿಎಸ್‌ಟಿ, ಎರಡನೆಯದು: ಥಿಯೇಟರ್‌ಗಳಲ್ಲಿ ಟಿಕೆಟ್ ಬೆಲೆ 100 ರೂ.ಗಿಂತ ಹೆಚ್ಚಾಗಿದ್ದರೆ ಶೇ.18ರಷ್ಟು ಜಿಎಸ್‌ಟಿ. ಉದಾಹರಣೆಗೆ ಕರ್ನಾಟಕದಲ್ಲಿ ಯಾವುದೇ ಚಿತ್ರದ ಟಿಕೆಟ್‌ಗೆ 18 ಪ್ರತಿಶತ ಜಿಎಸ್‌ಟಿ ವಿಧಿಸಲಾಗುತ್ತಿದೆ ಎಂದು ಇಟ್ಟುಕೊಳ್ಳೋಣ. ರಾಜ್ಯ ಸರಕಾರ ಸಿನೆಮಾವೊಂದಕ್ಕೆ ತೆರಿಗೆ ಮುಕ್ತ ಘೋಷಿಸಿದ ಬಳಿಕ ತೆರಿಗೆ ವ್ಯಾಪ್ತಿಯಿಂದ ತನ್ನ ಪಾಲಿನ ಶೇಕಡಾ 9ರಷ್ಟು ವಿನಾಯಿತಿ ನೀಡಲಾಗಿದೆ ಎಂದು ಅರ್ಥ. ಶೇ. 18ರ ಜಿಎಸ್‌ಟಿ ಬದಲಿಗೆ 9ರಷ್ಟು ತೆರಿಗೆ ವಿಧಿಸಲಾಗುತ್ತದೆ. ಹಾಗಾಗಿ ವಿಧಿಸುತ್ತಿರುವ ಶೇ.9ರಷ್ಟು ತೆರಿಗೆಯೂ ಕೇಂದ್ರದ ಪಾಲಾಗಿರುತ್ತದೆ. ಸರಳ ಭಾಷೆಯಲ್ಲಿ ಹೇಳುವುದಾದರೆ ರಾಜ್ಯವು ತನ್ನ ಪಾಲಿನ ತೆರಿಗೆಯ ಶೇಕಡಾ 50 ರಷ್ಟು ಮಾತ್ರ ಮನ್ನಾ ಮಾಡುವ ಹಕ್ಕು ಹೊಂದಿದೆ. ಹೀಗಾಗಿ, ಈ ತೆರಿಗೆ ಲಾಭ ಪ್ರೇಕ್ಷಕರಿಗೆ ದೊರೆಯಲಿದೆ. ಸಾಮಾನ್ಯವಾಗಿ ಸ್ಪೂರ್ತಿದಾಯಕ, ಸ್ವಾತಂತ್ರ ಹೋರಾಟಗಾರರು, ಕೋಮು ಸೌಹಾರ್ದತೆ ಉತ್ತೇಜಿಸುವ, ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಚಲನಚಿತ್ರಗಳಿಗೆ ತೆರಿಗೆ ಮುಕ್ತ ಘೋಷಿಸುವ ಅಧಿಕಾರ ರಾಜ್ಯ ಸರಕಾರಕ್ಕೆ ಬಿಟ್ಟದ್ದು. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಬಿಡುಗಡೆಯಾದ ದಿನದಿಂದ ದೇಶದ ಗಮನ ಸೆಳೆದಿದೆ. ಬಾಕ್ಸಾಫೀಸ್‌ನಲ್ಲಿ ನಿರೀಕ್ಷೆಗೂ ಮೀರಿ ಅತ್ಯುತ್ತಮ ಗಳಿಕೆ ಮಾಡುತ್ತಿರುವ ಚಿತ್ರದ ಒಟ್ಟಾರೆ ಕಲೆಕ್ಷನ್ 190 ಕೋಟಿ ರೂ ದಾಟಿದೆ. 1990ರಲ್ಲಿ ಕಾಶ್ಮೀರದಲ್ಲಿ ನಡೆದ ಘಟನೆಗಳು, ಕಾಶ್ಮೀರಿ ಪಂಡಿತರ ವಲಸೆ ಮೊದಲಾದ ಘಟನೆಗಳನ್ನು ಆಧರಿಸಿ ಚಿತ್ರ ತಯಾರಾಗಿದೆ. ಅನುಪಮ್ ಖೇರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪ್ರಕಾಶ್ ಬೆಳವಾಡಿ ಮೊದಲಾದ ತಾರೆಯರು ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತೀವ್ರ ಚರ್ಚೆಯನ್ನೂ ಹುಟ್ಟುಹಾಕಿದೆ. ರಾಜಕೀಯ ನೇತಾರರೂ ಸೇರಿದಂತೆ ಅಧಿಕಾರಿಗಳು, ಸಿನಿಮಾ ಪ್ರೇಮಿಗಳು ಚಿತ್ರವನ್ನು ಬಗೆಬಗೆಯಲ್ಲಿ ವ್ಯಾಖ್ಯಾನಿಸುತ್ತಿದ್ದಾರೆ.