ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.. ಅರ್ಜಿ ಸಲ್ಲಿಕೆ ಅವಧಿ ಮಾ.31ರ ವರೆಗೆ ವಿಸ್ತರಣೆ

8

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ವಿವಿಧ ಕೋರ್ಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿ ಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ಮಾರ್ಚ್ 31, 2022ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ. ಆನ್‌ಲೈನ್ ಅರ್ಜಿಗಳನ್ನು ಮಾತ್ರ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬ0ಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ / ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

ಕೋರ್ಸ್ ಅನುಸಾರ ಪ್ರೋತ್ಸಾಹಧನ ಮೊತ್ತ :
ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಕೋರ್ಸ್ ಅನುಸಾರ ನೀಡುವ ಪ್ರೋತ್ಸಾಹಧನದ ಮೊತ್ತಗಳ ವಿವರವನ್ನು ಇಲ್ಲಿ ನೀಡಲಾಗಿದೆ. ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ : 20,000 ಪದವಿ : 25,000 ಯಾವುದೇ ಸ್ನಾತಕೋತ್ತರ ಪದವಿ : 30,000 ಅಗ್ರಿಕಲ್ಚರ್, ಇಂಜಿನಿಯರ್, ವೆಟರಿನರಿ, ಮೆಡಿಷನ್ : 35,000 ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ hಣಣಠಿs://sತಿ.ಞಚಿಡಿ.ಟಿiಛಿ.iಟಿ/iಟಿಜex.ಚಿsಠಿx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳಾದ ಅಂಕಪಟ್ಟಿ, ಪಾಸ್ ಸರ್ಟಿಫಿಕೇಟ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಫೋಟೋ ಇತರೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಿರುತ್ತದೆ. ಈ ಮೂಲಕ ಮಾರ್ಚ್ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿಗೆ ಈ ಲಿಂಕ್ : https://sw.kar.nic.in/swprizemoney/WebPages/validation.aspx ECGC Recruitment 2022

ಅರ್ಜಿ ಮರುಮುದ್ರಣ : ಅಭ್ಯರ್ಥಿಗಳು ನೀವು ನಿಮ್ಮ ಕೋರ್ಸ್ನಲ್ಲಿ ಉತ್ತೀರ್ಣರಾದ ವರ್ಷವನ್ನು ಆಯ್ಕೆ ಮಾಡಿ. ತದನಂತರ ನಿಮ್ಮ ರಿಜಿಸ್ಟೆಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ. ಅಂತಿಮವಾಗಿ ಡೌನ್‌ಲೋಡ್ ಮಾಡಿಕೊಳ್ಳಿ.
ಅರ್ಜಿ ಮರುಮುದ್ರಣ ಲಿಂಕ್: https://sw.kar.nic.in/swprizemoney/WebPages/ReprintAcknowledgement.aspx NAL Recruitment 2022

 

 

Leave a Reply

Your email address will not be published. Required fields are marked *

error: Content is protected !!