ಕರಾಮುವಿ : ಪರೀಕ್ಷಾ ಶುಲ್ಕ ಪಾವತಿಗೆ ಮಾರ್ಚ್ 30 ಕೊನೆಯ ದಿನ
ದಾವಣಗರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿವಿಧ ಸಾಲಿನ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 2020-21 ನೇ ಸಾಲಿನ ದವಿ, ಸ್ನಾತಕೋತ್ತರ ಪದವಿ ಮುಂತಾದ ವಿದ್ಯಾರ್ಥಿಗಳಿಗೆ ವಾರ್ಷಿಕ ಅಥವಾ ಸೆಮಿಸ್ಟರ್ ಪರೀಕ್ಷೆಗಳಿಗೆ ದಂಶ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸುವ ಅವಧಿಯನ್ನು ಮಾ. 30 ರವರೆಗೆ ಮಾತ್ರ ಪುನರ್ ನಿಗದಿಪಡಿಸಲಾಗಿದೆ.
2001-02 ರಿಂದ 2014-15 ಹಾಗೂ 2018-19, 2019-20 ರ ಸ್ನಾತಕ ಪದವಿ ಮತ್ತು ಎಲ್.ಎಲ್.ಎಂ, ಎಂ.ಬಿ.ಎ(ಲಾ), ಎಂ.ಟಿ.ಎಂ ಪದವಿಯ ಪುನಾರಾವರ್ತಿತ ವಿದ್ಯಾರ್ಥಿಗಳು ಹಾಗೂ 2020-21ನೇ ಶೈಕ್ಷಣಿಕ ಸಾಲಿನಲ್ಲಿ (ಜನವರಿ ಆವೃತ್ತಿ) ಪ್ರವೇಶಾತಿ ಪಡೆದ ಸ್ನಾತಕ, ಸ್ನಾತಕೋತ್ತರ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್ಸಿ, ಎಂ.ಎ. ಎಂ.ಕಾಂ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಎಲ್ಲಾ ಎಂ,ಎಸ್ಸಿ ಮತ್ತು ಎಲ್ಲಾ ಸ್ನಾತಕ ಸ್ನಾತಕೊತ್ತರ ಡಿಪೆÇ್ಲೀಮಾ, ಸರ್ಟಿಫಿಕೇಟ್ ಕಾರ್ಯಕ್ರಮಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಅಥವಾ ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು ಅಂತರ್ಜಾಲದ ಮೂಲಕ ರೂ. 200/- ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ಏ.08 ರವರೆಗೆ ದಿನಾಂಕ ನಿಗದಿಗೊಳಿಸಲಾಗಿತ್ತು.
ಆದರೆ, ವಿದ್ಯಾರ್ಥಿಗಳ ಮನವಿ ಮೇರೆಗೆ ಹಾಗೂ ನಿಗದಿತ ಅವಧಿಯಲ್ಲಿ ಪರೀಕ್ಷೆಗಳನ್ನು ತುರ್ತಾಗಿ ನಡೆಸಬೇಕಾಗಿರುವುದರಿಂದ ಪರೀಕ್ಷಾ ಶುಲ್ಕಗಳನ್ನು ಪಾವತಿಸಲು ಮುಂದೂಡಲಾಗಿದ್ದ ಅವಧಿಯನ್ನು ದಂಡ ಶುಲ್ಕದೊಂದಿಗೆ ಮಾ.30 ರವರೆಗೆ ಪುನರ್ ನಿಗದಿಪಡಿಸಲಾಗಿದೆ.
ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಏಪ್ರಿಲ್ ಮೊದಲನೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಅಂತರ್ಜಾಲದಲ್ಲಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಹಾಗೂ ಆನ್‍ಲೈನ್ ಸಹಾಯವಾಣಿ ಸಂಖ್ಯೆ: 8800335638 ಸಂಪರ್ಕಿಸಬಹುದಾಗಿದೆ ಎಂದು ಕುಲಚಿವರು (ಪರೀಕ್ಷಾಂಗ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.