ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ

2

ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 3 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೆ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 2 ಮತ್ತು 3 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಮತ್ತು ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!