ಬಸವಾಪಟ್ಟಣ ಬಳಿಯ ಅರೇಹಳ್ಳಿ ಗ್ರಾಮದಲ್ಲಿ ಇಸ್ಪೀಟ್ ಜೂಟಾಟ.! 8 ಜನರ ಬಂಧನ

ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 8 ಜನರನ್ನು ಬಂಧಿಸಲಾಗಿದೆ. ದಿನಾಂಕ 12-04-2022 ರಂದು ಅರೇಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದೆ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಬಸವಾಪಟ್ಟಣ ಠಾಣೆ ಸಹಾಯಕ ಪೊಲೀಸ್ ಅಧೀಕ್ಷಕ  ಮಿಥುನ್ ಹೆಚ್.ಎನ್, ಐಪಿಎಸ್ ಇವರು ತಮ್ಮ ಠಾಣೆಯ ಸಿಬ್ಬಂದಿಗಳಾದ ಆನಂದ, ರವಿ,  ಇಬ್ರಾಹಿಂ ಮುನ್ನಾಖಾನ್, ರಾಜಾನಾಯ್ಕ್,  ನವೀನ್, ಶ್ರೀನಾಥ್, ಸಂತೋಷ್ ಪಾಟೀಲ್ ಅವರೊಂದಿಗೆ ಹೋಗಿ ದಾಳಿ ನಡೆಸಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 8 ಆರೋಪಿತರನ್ನು ದಸ್ತಗಿರಿ ಮಾಡಿದ್ದಾರೆ.
ಆರೋಪಿತರಿಂದ ಜೂಜಾಟಕ್ಕೆ ಬಳಸಿದ 25,160/- ರೂ ನಗದು ಹಣ, 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಬಸವಾಪಟ್ಟಣ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 62/2012 ಕಲಂ 87 ಕೆ.ಪಿ.ಆಕ್ಟ್ ರೀತ್ಯಾ ಪ್ರಕರಣ ದಾಖಲಿಸಿರುತ್ತಾರೆ.

 
                         
                       
                       
                       
                       
                       
                       
                      