PUC Student Death: ದಾವಣಗೆರೆ ಪಿಸಾಳೆ ಕಾಂಪೌಂಡ್ ನಲ್ಲಿ ಪಿಯುಸಿ ವಿದ್ಯಾರ್ಥಿ ನಿಗೂಢ ಸಾವು

pu student suspicious death

ದಾವಣಗೆರೆ: ಮನೆಯ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ದಾವಣಗೆರೆ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ನಡೆದೆ.ನಗರದ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ (18) ಮೃತಪಟ್ಟ ಯುವಕ, ಆತ ಇಂದು ಗಣಿತ ಪರೀಕ್ಷೆಯನ್ನು ಬರೆಯಬೇಕಾಗಿತ್ತು.

ಶುಕ್ರವಾರ ರಾತ್ರಿ ಊಟದ ನಂತರ ಮಿಥುನ್ ಮನೆಯ ಟೆರಸ್ ಮೇಲೆ ಓದುತ್ತಿದ್ದನು. 11.30ರ ಸಮಯದಲ್ಲಿ ಮಗ ಓದುತ್ತಿರುವುದನ್ನು ನೋಡಿದ ಪೋಷಕರು ಮಲಗಿಕೊಂಡರು. ಬೆಳಗ್ಗೆ ನೋಡಿದಾಗ ಮಿಥುನ್ ಮನೆಯ ಟೆರಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವುದು ಕಂಡು ಬಂದಿದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಪರಿಶೀಲಿಸಿದರು. ಶ್ವಾನದಳದೊಂದಿಗೆ ಬೆರಳಚ್ಚು ತಜ್ಞ ಪೋಲೀಸರು ತನಿಖೆ ಶುರು ಮಾಡಿದ್ದಾರೆ. ಮೃತ ಮಿಥುನ್, ಸತೀಶ್ ಪಿಸಾಳೆ ದಂಪತಿಯ ಏಕೈಕ ಪುತ್ರನಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿರುವ ಮಗನ ಶವ ಕಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಅಲ್ಲದೇ ಮಗನ ಸಾವು ಸಂಶಯಾಸ್ಪದವಾಗಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ.

garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!