ಮೇ.04 ರಂದು ದಾವಣಗೆರೆ ಜಿಲ್ಲೆಯಲ್ಲಿ  11.0 ಮಿ.ಮೀ. ಸರಾಸರಿ ಮಳೆ ವಿವರ 

ದಾವಣಗೆರೆ: ಜಿಲ್ಲೆಯಲ್ಲಿ ಮೇ.04 ರಂದು 11.0 ಮಿ.ಮೀ. ಸರಾಸರಿ ಮಳೆಯಾಗಿದ್ದು. 3.20 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿ 14.0 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 6.0 ಮೀ.ಮಿ, ಹರಿಹರದಲ್ಲಿ 11.0 ಮಿ.ಮೀ, ಹೊನ್ನಾಳಿ 14.0 ಮಿ.ಮೀ ಮಳೆಯಾಗಿದೆ. ಜಗಳೂರು 2.0 ಮಿ.ಮೀ, ನ್ಯಾಮತಿಯಲ್ಲಿ 26.0 ಮಿ.ಮೀ ಮಳೆÉಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.0.60 ಲಕ್ಷ ಮತ್ತು 4 ಎಕರೆ ಬಾಳೆಬೆಳೆ ಹಾನಿಯಾಗಿದ್ದು, ರೂ.0.70 ಲಕ್ಷ.ಅಂದಾಜು ನಷ್ಟ ಸಂಭವಿಸಿರುತ್ತದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 3 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.0.90 ಲಕ್ಷ ಮತ್ತು 4 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ.0.30 ಲಕ್ಷ ಅಂದಾಜು ನಷ್ಟ ಸಂಭವಿಸುತ್ತದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1.20 ಎಕರೆ ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದು, ರೂ.0.70 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಒಟ್ಟು ರೂ.3.20 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!