ದಾವಣಗೆರೆಯ ಬಿಐಇಟಿ ಕಾಲೇಜಿನ 39 ನೇ ಪದವಿ ಪ್ರದಾನ ಸಮಾರಂಭ

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ BIET ೩೯ ನೇ ಪದವಿ ಪ್ರದಾನ ಸಮಾರಂಭವು GRADUATION DAY ಮೇ.೭ರ ಇಂದು ಬೆಳಿಗ್ಗೆ ೧೦.೩೦ ಗಂಟೆಗೆ ಕಾಲೇಜಿನ ಆವರಣದಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ್ ಸಭಾಂಗಣದಲ್ಲಿ SS MALLIKARJUN ಏರ್ಪಡಿಸಲಾಗಿದೆ.
ಸಮಾರಂಭದ ಮುಖ್ಯ ಅತಿಥಿಗಳಾಗಿ ಧಾರವಾಡ ಐಐಟಿಯ ನಿರ್ದೇಶಕರಾದ ಪ್ರೊ. ಪಿ. ಸೇಶು ಹಾಗೂ ಕುಲಸಚಿವರಾದ ಡಾ. ಎಸ್. ಬಸವರಾಜಪ್ಪ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಬಾಪೂಜಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಎಸ್.ಎಸ್ . ಮಲ್ಲಿಕಾರ್ಜುನ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು SHAMANUR SHIVASHANKARAPPA ಬಾಪೂಜಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಡಾ.ಶಾಮನೂರು ಶಿವಶಂಕರಪ್ಪವಹಿಸಿಕೊಳ್ಳಲಿದ್ದಾರೆ.
ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಬಿ. ಅರವಿಂದ ಮತ್ತು ನಿರ್ದೇಶಕರಾದ ಪ್ರೊ:ವೈ. ವೃಷಭೇಂದ್ರಪ್ಪ ಹಾಗೂ ಕಾಲೇಜಿನ ಎಲ್ಲಾ ಸಿಬ್ಬಂದಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಸುಮಾರು ೬೫೦ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪದವಿ ಪ್ರಮಾಣ ಪತ್ರವನ್ನು ಸ್ವೀಕರಿಸಲಿದ್ದು, ವಿಶ್ವವಿದ್ಯಾಲಯ ರ‍್ಯಾಂಕ್ ವಿಜೇತರು ಹಾಗೂ ವಿವಿಧ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಮತ್ತು ಚಿನ್ನದ ಪದಕ ವಿಜೇತರರಿಗೆ ಇದೇ ವೇಳೆ ಸನ್ಮಾನಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಬಿ. ಅರವಿಂದ ತಿಳಿಸಿದ್ದಾರೆ.
garudavoice21@gmail.com 9740365719