ದಾವಣಗೆರೆಯಲ್ಲಿ ಮೇ.11ರ ಮಳೆ 34.44 ಲಕ್ಷ ಅಂದಾಜು ನಷ್ಟ

male hani

ದಾವಣಗೆರೆ: ಜಿಲ್ಲೆಯಲ್ಲಿ ಮೇ.11ರಂದು 11.0 ಮಿ.ಮೀ. ಸರಾಸರಿ ಮಳೆಯಾಗಿದ್ದು. 34.44 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ 12.0 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 15.0, ಹರಿಹರದಲ್ಲಿ 14.0 ಮಿ.ಮೀ, ಹೊನ್ನಾಳಿ 15.0 ಮಿ.ಮೀ ಮಳೆಯಾಗಿದೆ. ಜಗಳೂರು 3.0 ಮಿ.ಮೀ, ನ್ಯಾಮತಿಯಲ್ಲಿ 7.0 ಮಿ.ಮೀ ಮಳೆೆಯಾಗಿದೆ.
ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ 01 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ 0.30 ಲಕ್ಷ ಮತ್ತು 25-00 ಎಕರೆ ಬೆಳೆ ಹಾನಿಯಾಗಿದ್ದು, ರೂ.0.75 ಲಕ್ಷ ಒಟ್ಟು ರೂ.1.05 ಲಕ್ಷ ನಷ್ಟ ಸಂಭವಿಸಿದೆ.


ಹರಿಹರ ತಾಲ್ಲೂಕಿನ ವ್ಯಾಪ್ತಿಯಲ್ಲಿ 02 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ 0.60 ಲಕ್ಷ ಮತ್ತು 510-00 ಎಕರೆ ಬೆಳೆ ಹಾನಿಯಾಗಿದ್ದು, ರೂ.32.14 ಲಕ್ಷ ಒಟ್ಟು ರೂ. 32.74 ಲಕ್ಷ ನಷ್ಟ ಸಂಭವಿಸಿದೆ. ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಎಕರೆ ಅಡಿಕೆ ಬೆಳೆ ಹಾನಿಯಾಗಿದ್ದು, ರೂ.0.25 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.40 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ.34.44 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!