6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ : 2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ದಿನಾಂಕ ಮೇ.15 ಭಾನುವಾರದಂದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ, ನಿಜಲಿಂಗಪ್ಪ ಬಡಾವಣೆ ದಾವಣಗೆರೆ ಇಲ್ಲ್ಲಿ ಪರೀಕ್ಷೆಯನ್ನು ಹಮ್ಮಿಕೊಂಡಿದ್ದು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ಪರೀಕ್ಷೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಹರಿಹರ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಕೊಂಡಜ್ಜಿ ಮೊ: 9008815296, ಚನ್ನಗಿರಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ ಕೆರೆಬಿಳಚಿ ಮೊ: 9036866642, ದಾವಣಗೆರೆಟೌನ್ ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ಬಾಲಕಿಯರ ವಸತಿ ಶಾಲೆ ನಿಜಲಿಂಗಪ್ಪ ಬಡಾವಣೆ ಮೊ: 9916828601, ಹೊನ್ನಾಳಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ ಮೊ: 9164855466, ಜಗಳೂರು ತಾಲ್ಲೂಕ್ ಅಲ್ಪ ಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ ಮೊ: 9964596266 ಇವರಿಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.