ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲಕಾಪೂರೆ ಅಧಿಕಾರ ಸ್ವೀಕಾರ
ದಾವಣಗೆರೆ: ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲಕಾಪೂರೆ ಇಂದು ಅಧಿಕಾರ ಸ್ವೀಕರಿಸಿದರು. ರಘುನಾಥ್ ರಾವ್ ಮಲಕಾಪೂರೆ ಅವರು 1990 ರಿಂದ 1993ರ ಅವಧಿಯಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ 1993 ರಿಂದ 1996ರಲ್ಲಿ ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ, 1996-1998ರಲ್ಲಿ ಬಿಜೆಪಿ ಯುವ ಮೋರ್ಚಾದ ರಾಷ್ಟಿಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ, 1998-2000ರಲ್ಲಿ ರಾಜ್ಯಾಧ್ಯಕ್ಷರಾಗಿ, 2000-2009ರವರೆಗೆ ಮೂರು ಅವಧಿಯಲ್ಲಿ ರಾಜ್ಯ ಕಾರ್ಯದರ್ಶಿಯಾಗಿ, 2009-2015ರಲ್ಲಿ ಎರಡು ಅವಧಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, 2009-2012ರಲ್ಲಿ ರಾಜ್ಯ ಶಿಸ್ತು ಸಮಿತಿ ಸಂಚಾಲಕರಾಗಿ, 2008ರಲ್ಲಿ ರಾಜ್ಯ ಚುನಾವಣಾಧಿಕಾರಿಯಾಗಿ, ರಾಜ್ಯ ಚುನಾವಣಾ ಸಮಿತಿ ಸದಸ್ಯರಾಗಿ, ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರಾಗಿ, 2005ರಿಂದ 2010ರ ಅವಧಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಕಾರ್ಯಾಧ್ಯಕ್ಷರಾಗಿ, 2010-2015ರಲ್ಲಿ ರಾಜ್ಯಾಧ್ಯಕ್ಷರಾಗಿ ಮತ್ತು 2012-2018, ಹಾಗೆಯೇ 2018ರಿಂದ 2ನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
garudavoice21@gmail.com 9740365719