ಮೇ.17ರ ಮಳೆಗೆ 42.33 ಲಕ್ಷ ರೂ.ನಷ್ಟ

ದಾವಣಗೆರೆ : ಜಿಲ್ಲೆಯಲ್ಲಿ ಮೇ.17 ರಂದು 9.1 ಮಿ.ಮೀ. ಸರಾಸರಿ ಮಳೆಯಾಗಿದ್ದು. 42.33 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ 15.2 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 6.5, ಹರಿಹರದಲ್ಲಿ 7.1 ಮಿ.ಮೀ, ಹೊನ್ನಾಳಿ 8.3 ಮಿ.ಮೀ ಮಳೆಯಾಗಿದೆ. ಜಗಳೂರು 5.9 ಮಿ.ಮೀ, ನ್ಯಾಮತಿಯಲ್ಲಿ 7.6 ಮಿ.ಮೀ ಮಳೆೆಯಾಗಿದೆ.
ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ 0.30 ಗುಂಟೆ ಅಡಿಕೆ ಬೆಳೆ ಮತ್ತು 0-10 ಗುಂಟೆ ತೆಂಗು ಬೆಳೆ ಹಾನಿಯಾಗಿದ್ದು, ರೂ. 0.70 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಹರಿಹರ ತಾಲ್ಲೂಕಿನ ವ್ಯಾಪ್ತಿಯಲ್ಲಿ 5 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.50 ಲಕ್ಷ, 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.30 ಲಕ್ಷ, 16 ವಾಸದ ಮನೆಗಳ ಮನೆಯ ಮೇಲ್ಛಾವಣಿ ಸಿಮೆಂಟ್ ಶೀಟ್, ಹಂಚು ಹಾನಿಯಾಗಿದ್ದು, ರೂ.4.80 ಲಕ್ಷ ಮತ್ತು 329-00 ಎಕರೆ ಭತ್ತದ ಬೆಳೆ, 5-00 ಎಕರೆ ಬಾಳೆ ಬೆಳೆ, 8-00 ಎಕರೆ ಅಡಿಕೆ ಮತ್ತು ತೆಂಗು ಬೆಳೆ ಹಾನಿಯಾಗಿದ್ದು, ರೂ. 26.13 ಲಕ್ಷ ಒಟ್ಟು ರೂ.32.73 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಹೊನ್ನಾಳಿ ತಾಲ್ಲೂಕಿನ ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.50 ಲಕ್ಷ, 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ.1.00 ಲಕ್ಷ ಮತ್ತು 3-00 ಎಕರೆ ಬಾಳೆ ಬೆಳೆ ಹಾನಿಯಾಗಿದ್ದು, ರೂ.0.30 ಲಕ್ಷ ಒಟ್ಟು 1.80 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ನ್ಯಾಮತಿ ತಾಲ್ಲೂಕಿನ ವ್ಯಾಪ್ತಿಯಲ್ಲಿ 4 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.2.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕಿನ ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.0.50ಲಕ್ಷ1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.50 ಲಕ್ಷ, 1 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ.0.10 ಲಕ್ಷ, 20-00 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ.4.00 ಲಕ್ಷ ಒಟ್ಟು ರೂ.5.10 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ. 42.33 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.