ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ

linganna

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೊ. ಎನ್.ಲಿಂಗಣ್ಣ ಇವರ 2021-22ನೇ ಸಾಲಿನ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಡಿ ಆಯ್ಕೆಯಾದ 05 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್ ಸಹಿತ)ಗಳನ್ನು ವಿತರಿಸಿದರು.
ಗುರುವಾರ ನಗರದ ದೇವರಾಜ್ ಅರಸ್ ಬಡಾವಣೆ ಬಿ.ಬ್ಲಾಕ್ ಹತ್ತಿರದಲ್ಲಿರುವ ಅಂಧ ಮಕ್ಕಳ ಸರ್ಕಾರಿ ಪಾಠ ಶಾಲಾ ಆವರಣದಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ ಪ್ರಕಾಶ್, ಸಿಬ್ಬಂದಿ ದುರ್ಗೆಶ್, ಸೈಯದ್, ಮಾರುತಿ ಹಾಗೂ ಫಲಾನುಭವಿಗಳು ಹಾಜರಿದ್ದರು.

 

 

 

 

Leave a Reply

Your email address will not be published. Required fields are marked *

error: Content is protected !!