ಕೊಡಗನೂರು: ಐಟಿಐ ಕೋರ್ಸು ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕೊಡಗನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್-2022 ರ ಸಾಲಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಫಿಟ್ಟರ್ ವೃತ್ತಿಗಳಲ್ಲಿ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊಡಗನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆದುಕೊಂಡು, ಭರ್ತಿಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂ.06 ಸಂಜೆ.05 ಗಂಟೆಯೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಡಗನೂರು ಸರ್ಕಾರಿ ಕೈಗಾರಿಕಾ ಸಂಸ್ಥೆಗೆ ಭೇಟಿ ನೀಡಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
                         
                       
                       
                       
                       
                       
                       
                      