ಹೊನ್ನಾಳಿ: ಗ್ರಾಮವಾಸ್ತವ್ಯದಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಎಲ್ಲರ ಗಮನಸೆಳೆದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಅಧಿಕಾರಿಗಳನ್ನು ಹೊತ್ತ ಟ್ಯಾಕ್ಟರ್ ಚಲಾಯಿಸುವ ಮೂಲಕ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಶಾಸಕ ರೇಣುಕಾಚಾರ್ಯ ಗಮನ ಸೆಳೆದರು. ಈ ವೇಳೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಕಾರ್ಯಕ್ರಮದ ನಿಮಿತ್ತ ತಮ್ಮ ಗ್ರಾಮಕ್ಕೆ ಆಗಮಿಸುತ್ತಿದ್ದ ಅಧಿಕಾರಿಗಳನ್ನು ಮತ್ತು ಶಾಸಕರನ್ನು ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು.

 
                         
                       
                       
                       
                       
                       
                       
                      