ಸವಿತಾಬಾಯಿ ಮಾಯಕೊಂಡ ವಿಧಾನಸಭಾ ಕ್ಷೇತ್ರ ಸಂಚಾರ!

congrees

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಣಿವೆಬಿಳಚಿ, ಹೊಸನಗರ, ಹೊಸಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಸವಿತಾಬಾಯಿ ಇಂದು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರುಗಳ ಒಟ್ಟುಗೂಡಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಕಾರ್ಯಕರ್ತರ ಸಭೆಗಳನ್ನು ಕರೆಯುವ, ಪಕ್ಷವನ್ನು ಬೂತ್ ಮಟ್ಟದಿಂದ ಬಲಪಡಿಸುವ ಬಗ್ಗೆ ಚರ್ಚೆಗಳನ್ನು ನಡೆಸಿದರು.

ಹಾಗೆಯೇ ಹೊಸಳ್ಳಿಯ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ವೀಕ್ಷಿಸಿ ಕೋಡಿ ಬಿದ್ದ ಜಾಗದಲ್ಲಿ ಸಾರ್ವಜನಿಕರಿಗೆ ಓಡಾಡಲು ಸೇತುವೆಗೆ ಕಬ್ಬಿಣದ ಪೈಪಿನ ಅವಶ್ಯಕತೆ ಇದೆ ಎಂದು ಜನರು ವಿವರಿಸಿದರು. ಇದಕ್ಕೆ ಅವಶ್ಯಕವಾದ ಸಹಾಯವನ್ನು ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಹೊಸಳ್ಳಿ ಗ್ರಾಮದ ಸರ್ಕಾರಿ ಶಾಲೆಯು ದುರಸ್ಥಿಯಲ್ಲಿದ್ದು ಮಕ್ಕಳಿಗೆ ಕುಳಿತುಕೊಳ್ಳಲು ಕೊಠಡಿಯ ಅವಶ್ಯಕತೆ ಇದ್ದು ಗ್ರಾಮಸ್ಥರೆಲ್ಲರೂ ಸೇರಿ ಹಣವನ್ನು ಕಲೆಕ್ಟ್ ಮಾಡಿ ಕೊಠಡಿಯ ಮರು ನಿರ್ಮಾಣ ಮಾಡಲು ಮುಂದಾಗಿದ್ದು, ಅವರೊಂದಿಗೆ ತಾವು ಕೂಡ ಕೈಜೋಡಿಸುವುದಾಗಿ ಭರವಸೆ ನೀಡಿದ್ದಾರೆ.

garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!