ಏಕಬಳಕೆ ಪ್ಲಾಸ್ಟಿಕ್ ನಿಷೇಧ : ಪಾಲಿಕೆ ಅಧಿಕಾರಿಗಳಿಂದ ಪರೀಶಿಲನೆ

ದಾವಣಗೆರೆ :ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ (SUP) ಗಳನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಮಾಹಿತಿಗಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳ ಧ್ವನಿವರ್ಧಕಗಳ ಮೂಲಕ ಪ್ರತಿನಿತ್ಯ ಪ್ರಚಾರ ಮಾಡಲಾಗುತ್ತಿದ್ದು, ನಗರದ ವಿವಿಧ ವರ್ತಕರುಗಳಿಗೆ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಪರಿಸರ ಅಧಿಕಾರಿಗಳಿಂದ ಎಲ್ಲಾ ಉದ್ದಿಮೆದಾರರು ಹಾಗೂ ಸಾರ್ವಜನಿಕರಿಗೆ ಏಕ ಬಳಕೆ ಪ್ಲಾಸ್ಟಿಕ್‍ಗಳ ಬಳಕೆ ಮತ್ತು ಮಾರಾಟ ನಿಷೇಧಿಸುವಂತೆ ಸಭೆ ಆಯೋಜಿಸಿ ಜಾಗೃತಿ ಮೂಡಿಸಲಾಗಿದೆ. ಏಕ ಬಳಕೆ ಪ್ಲಾಸ್ಟಿಕ್‍ಗಳ ಉಪಯೋಗಿಸುವುದು ಕಂಡು ಬಂದಲ್ಲಿ ಮಹಾನಗರ ಪಾಲಿಕೆಯಿಂದ ದಂಡ ವಿಧಿಸುವುದಾಗಿ ಸೂಚಿಸಲಾಗಿದೆ.
ಜುಲೈ ಮೊದಲ ವಾರದಲ್ಲಿ ಮಹಾನಗರ ಪಾಲಿಕೆಯ ಮೂರು ಆರೋಗ್ಯ ನಿರೀಕ್ಷಕ ತಂಡಗಳಿಂದ 300 ಕ್ಕೂ ಅಧಿಕ ಉದ್ದಿಮೆಗಳನ್ನು ಪರಿಶೀಲಿಸಿದ್ದು, 101 ಉದ್ದಿಮೆಗಳಿಂದ ಒಟ್ಟು ರೂ. 66,000 ದಂಡ ವಸೂಲಾತಿ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.