ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜುಲೈ 21 ರ0ದು ಅಹವಾಲು ಸ್ವೀಕಾರ

ದಾವಣಗೆರೆ : ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜುಲೈ 21 ರ0ದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶರಾದ ಪ್ರವೀಣ ನಾಯಕ್ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ಜು.21 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸಾರ್ವಜನಿಕರು ತಾಲ್ಲೂಕು ಮತ್ತು ಜಿಲ್ಲೆಯ ಸರಕಾರಿ ಕಾರ್ಯಾಲಯಗಳಲ್ಲಿ ನಡೆಯುತ್ತಿರುವ ದುರಾಡಳಿತ, ವಿಳಂಬ ನೀತಿ, ಹಣ ದುರುಪಯೋಗ , ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅವುಸರಿದುವುದರ ಕುರಿತು ದೂರುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.