ಹೃದಯಾಘಾತದಿಂದ ದಾವಣಗೆರೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮೇಜರ್ ಹರ್ಷ ನಿಧನ

Davanagere zilla panchayath deputy Secretary harsha died due to heart attack

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ DS ಮೇಜರ್ ಹರ್ಷ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಮರಳಿ ದಾವಣಗೆರೆ ಜಿಲ್ಲೆಗೆ ಆಗಮಿಸಿದ್ದರು. ದಾವಣಗೆರೆ ತಾಲ್ಲೂಕ್ ಕಂದಗಲ್ ಗ್ರಾಮದ ಮೇಜರ್ ಡಾ. ಹರ್ಷ ಕಳೆದ ಎರಡು ತಿಂಗಳ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿಯಾಗಿ DS ಕರ್ತವ್ಯ ವಹಿಸಿಕೊಂಡಿದ್ದರು. ಈ ಹಿಂದೆ ದಾವಣಗೆರೆ ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಧಿಕಾರಿಯಾಗಿ EO ಕೆಲಸ ಮಾಡಿದ್ದರು.

ಮೇಜರ್ ಹರ್ಷರ ಪತ್ನಿ ಮಧುಮಾಲ ಕೂಡ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರಿಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನ ಅಗಲಿದ್ದಾರೆ. ದಾವಣಗೆರೆ ತಾಲ್ಲೂಕಿನ ಕಂದಗಲ್ ಗ್ರಾಮದಲ್ಲಿ ನಾಳೆ ಬುಧವಾರ ಆಗಸ್ಟ್ 31 ರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!