ಕೋವಿಡ್ ಆತಂಕ: ಮಾಸ್ಕ್ ಕಡ್ಡಾಯ.. ಹೀಗಿದೆ ಹೊಸ ರೂಲ್ಸ್…

ಬೆಂಗಳೂರು: ಕೋವಿಡ್ ಆತಂಕ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಘೋಷಣೆಯಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ನಿರ್ಧರಿಸಲಾಗಿದೆ.
ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್, ಶಾಲಾ ಕಾಲೇಜು, ಸಿನಿಮಾ ಮಂದಿರಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದರು. ಬಸ್, ರೈಲು, ವಿಮಾನ ಸೇರಿ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಿದರು. ನೂತನ ವರ್ಷಾಚರಣೆ 31ರ ರಾತ್ರಿ 1 ಗಂಟೆವರೆಗೆ ಮಾತ್ರ ಅವಕಾಶವಿರಲಿದೆ ಎಂದು ತಿಳಿಸಿದರು.
ಪ್ರಮುಖ ನಿಯಮಗಳು:
- ಶಾಲಾ– ಕಾಲೇಜು, ಸಿನಿಮಾ ಮಂದಿರಗಳಲ್ಲಿ ಮಾಸ್ಕ್ ಕಡ್ಡಾಯ
- ಬಸ್ , ರೈಲು, ವಿಮಾನ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ.
- ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಕಡ್ಡಾಯ.
- ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್ ಗಳಲ್ಲೂ ಮಾಸ್ಕ್ ಕಡ್ಡಾಯ.
- ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಇಲ್ಲ.
- ವರ್ಷಾಚರಣೆಗೆ ನಿರ್ಬಂಧ ಇಲ್ಲ. ಆದರೆ ಡಿಸೆಂಬರ್ 31ರ ರಾತ್ರಿ 1 ಗಂಟೆವರೆಗೆ ಸಾರ್ವಜನಿಕ ಆಚರಣೆಗೆ ಮಾತ್ರ ಅವಕಾಶ.

 
                         
                       
                       
                       
                       
                      